ಬೆಲೆ ಏರಿಕೆ, ಮುಳುಗುತ್ತಿರುವ ಬೆಂಗಳೂರು, ಸಮಸ್ಯೆಗಳ ನಡುವೆ ಜನಸ್ಪಂದನ: ಪ್ರಿಯಾಂಕ್ ಖರ್ಗೆ

ಬೆಲೆ ಏರಿಕೆ ಜನಸಾಮಾನ್ಯರ ಬೇಬು ಸುಡುತ್ತಿದೆ. ಜನ ಸಾಮಾನ್ಯರು, ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದರು, ಬೆಂಗಳೂರು ಮುಳುಗುತ್ತಿದ್ದರೂ, ನಿರುದ್ಯೋಗಿ ಯುವಕರು ಆಕ್ರೋಶದಲ್ಲಿದ್ದರೂ ಬಿಜೆಪಿಯವರು ಜನಸ್ಪಂದನ ಸಮಾವೇಶ ಕಾರ್ಯಕ್ರಮ ಮಾಡಿದ್ದಾರೆ"
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಲೆ ಏರಿಕೆ ಜನಸಾಮಾನ್ಯರ ಬೇಬು ಸುಡುತ್ತಿದೆ. ಜನ ಸಾಮಾನ್ಯರು, ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದರು, ಬೆಂಗಳೂರು ಮುಳುಗುತ್ತಿದ್ದರೂ, ನಿರುದ್ಯೋಗಿ ಯುವಕರು ಆಕ್ರೋಶದಲ್ಲಿದ್ದರೂ ಬಿಜೆಪಿಯವರು ಜನಸ್ಪಂದನ ಸಮಾವೇಶ ಕಾರ್ಯಕ್ರಮ ಮಾಡಿದ್ದಾರೆ" ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ವಿದ್ಯಾನಿಧಿ ಯೋಜನೆ ಅಡಿಯಲ್ಲಿ 20 ಲಕ್ಷ ಫಲಾನುಭವಿಗಳಿದ್ದಾರೆ ಎಂದು ಹೇಳಿದ್ದಾರೆ. ಆದರೆ ಕಳೆದ ತಿಂಗಳು ಘೋಷಣೆಯಾದ ಯೋಜನೆ. ಸರ್ಕಾರದ ಮಾಹಿತಿ ಪ್ರಕಾರ 10 ಲಕ್ಷಕ್ಕಿಂತ ಹೆಚ್ಚು ಜನ ಅರ್ಜಿ ಹಾಕಿಲ್ಲ. ಆದರೆ 20 ಲಕ್ಷ ಫಲಾನುಭವಿಗಳು ಎಂದು ಹೇಳುತ್ತಾರೆ.

"150 ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರಿಗೆ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ. ಇನ್ನು ಮುಂದೆ ಅವರು ಭಾಷಣ ಮಾಡುವ ಮುನ್ನ ಬಜೆಟ್ ಪುಸ್ತಕ ನೋಡಿ ಮಾತನಾಡಬೇಕು. ಅವರು ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನ ಘೋಷಿಸಿರುವುದೇ 259 ಕೋಟಿ. ಇದರಲ್ಲಿ 159 ಹಾಸ್ಟೆಲ್ ನಿರ್ಮಾಣ ಮಾಡಲು ಸಾಧ್ಯವೇ...? ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಕಟ್ಟಿದ ಹಾಸ್ಟೆಲ್‌ಗಳನ್ನು ಇನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಕಳೆದ 3 ವರ್ಷಗಳಲ್ಲಿ ಎಷ್ಟು ಹೊಸ ಹಾಸ್ಟೆಲ್ ಕಟ್ಟಿಸಿದ್ದಾರೆ ತೋರಿಸಲಿ" ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಲಿ ಕುರ್ಚಿಗಳ ಎದುರು ಸುಳ್ಳಿನ ಸರಮಾಲೆಯನ್ನೇ ಹೆಣೆದಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದು ರಾಜಕೀಯಕ್ಕಾಗಿ ಸುಳ್ಳು ಹೇಳುವುದು ಘನತೆಯಲ್ಲ. ನಿಮಗೆ ತಾಕತ್ತಿದ್ದರೆ ಮೊದಲು ನಿಮ್ಮ ಮೇಲಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com