
ಅಮಿತ್ ಶಾ
ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಸಂಬಂಧ ಚರ್ಚಿಸಲಾಗುವುದು.
ಪಕ್ಷದ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಲು ಇದೇ ರೀತಿಯ ತಂತ್ರಗಳು ಸಹಾಯ ಮಾಡುತ್ತವೆ. ಖಾಲಿ ಇರುವ ಕೆಲವು ಸಚಿವ ಸ್ಥಾನಗಳನ್ನು ತುಂಬಲು ಹಾಗೂ ದೀರ್ಘಾವಧಿಯಿಂದ ಬಾಕಿ ಉಳಿದಿರುವ ಸಂಪುಟ ವಿಸ್ತರಣೆ ಬಗ್ಗೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಮಿತ್ ಶಾ ಅವರ ಸಲಹೆಯನ್ನು ಪಡೆಯಬಹುದು ಎಂದು ತಿಳಿದುಬಂದಿದೆ.
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಗೆದ್ದು ಬಿಜೆಪಿ ಬೀಗುತ್ತಿದೆ, ಪಕ್ಷದ ಬಹುತೇಕ ನಾಯಕರು ಮತ್ತು ಕಾರ್ಯಕರ್ತರು ಚುನಾವಣೆಗಾಗಿ ಉತ್ಸುಕರಾಗಿದ್ದಾರೆ. ಅನುಕೂಲಕರ ಪರಿಸ್ಥಿತಿಯ ಲಾಭ ಪಡೆಯಲು ಸಿದ್ಧರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಒಂದು ತಿಂಗಳಿಂದ ಹಿಜಾಬ್ ವಿಷಯದೊಂದಿಗೆ ವಿರೋಧ ಪಕ್ಷಕಾಂಗ್ರೆಸ್ ಜೊತೆ ಬಿಜೆಪಿ ಸಂಘರ್ಷ ನಡೆಸುತ್ತಿದೆ, ಇದರೊಂದಿಗೆ ಜನತೆಯ ನಾಡಿ ಮಿಡಿತವನ್ನು ಅರ್ಥ ಮಾಡಿಕೊಂಡಿದೆ. ಹೀಗಾಗಿ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದು ಸೇರಿದಂತೆ ಹಲವು ಸೂಕ್ಷ್ಮ ವಿಷಯಗಳಲ್ಲಿ ಜನರ ಭಾವನೆ ಅರ್ಥ ಮಾಡಿಕೊಂಡಿದೆ.
ಏಪ್ರಿಲ್ 1ರ ನಂತರ ಮೂರ್ನಾಲ್ಕು ತಂಡಗಳಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರು ಪ್ರವಾಸ ಮಾಡಲಿದ್ದು, ಜನಬೆಂಬಲ ಯಾವ ರೀತಿ ಬಿಜೆಪಿ ಪರವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಏಪ್ರಿಲ್ 1ನೇ ತಾರೀಖು ರಾಜ್ಯಕ್ಕೆ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಮುಂದಿನ ಚುನಾವಣೆ ಮುಗಿಯುವವರೆಗೂ ಬಸವರಾಜ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿರಲಿದ್ದು, ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯುತ್ತದೆ. ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಯಿಲ್ಲ, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದರು.