ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ಸುಳಿವು: ಕಾರ್ಯತಂತ್ರ ರೂಪಿಸಲು ರಾಜ್ಯದ ನಾಯಕರೊಂದಿಗೆ ರಾಹುಲ್ ಗಾಂಧಿ ಚರ್ಚೆ

ರಾಜ್ಯದಲ್ಲಿ ಅವಧಿ ಮುನ್ನ ಚುನಾವಣೆ ನಡೆಯುವ ಊಹಾಪೋಹಗಳು ಆರಂಭವಾಗಿದ್ದು, ಈ ನಡುವಲ್ಲೇ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿ, ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

Published: 01st April 2022 12:23 PM  |   Last Updated: 01st April 2022 02:04 PM   |  A+A-


Senior Congress leader Rahul Gandhi greets Ashwini, wife of actor Puneeth Rajkumar, at the latter’s residence in Bengaluru on Thursday

ನಟ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ.

The New Indian Express

ಬೆಂಗಳೂರು: ರಾಜ್ಯದಲ್ಲಿ ಅವಧಿ ಮುನ್ನ ಚುನಾವಣೆ ನಡೆಯುವ ಊಹಾಪೋಹಗಳು ಆರಂಭವಾಗಿದ್ದು, ಈ ನಡುವಲ್ಲೇ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿ, ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಹುಲ್ ಗಾಂಧಿಯವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ರಾಜ್ಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಚುನಾವಣೆಗೆ ಕಾರ್ಯತಂತ್ರಗಳ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿ, ಚರ್ಚೆ ನಡೆಸಲಿದ್ದಾರೆ. ಚುನಾವಣೆಗೂ ಮುನ್ನ ಕೋಮು ವಿಚಾರಗಳ ಕೈಗೆತ್ತಿಕೊಳ್ಳುವ ಬಿಜೆಪಿಯ ಪ್ರಯತ್ನಗಳನ್ನು ಎದುರಿಸಲು ರೂಪಿಸಬೇಕಾಗಿರುವ ತಂತ್ರ ಸೇರಿದಂತೆ ರಾಜ್ಯದ ಎಲ್ಲಾ ರಾಜಕೀಯ ವಿಚಾರಗಳ ಕುರಿತು ಸಭೆಗಳಲ್ಲಿ ಚರ್ಚೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿರುವ ರಾಹುಲ್ ಗಾಂಧಿಯವರು ಎರಡು ಸಭೆಗಳನ್ನು ನಡೆಸಲಿದ್ದು, ಒಂದು ಸಭೆ ಹಿರಿಯ ನಾಯಕರೊಂದಿಗೆ, ಎರಡನೇ ಸಭೆ ಎಲ್ಲಾ ಸಂಘಟನೆಗಳ ಮುಖ್ಯಸ್ಥರೊಂದಿಗೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: ನಡೆದಾಡಿದ ದೇವರ 115ನೇ ಜಯಂತ್ಯೋತ್ಸವ: ಬಸವ ಭಾರತ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಸಭೆಯಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆನ್ನಲಾಗಿದೆ. ಸಭೆಯಲ್ಲಿ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನವೂ ಚರ್ಚೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.

ಡಿಜಿಟಲ್ ಅಭಿಯಾನದ ವೇಳೆ 50 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.


Stay up to date on all the latest ರಾಜಕೀಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp