ರಾಜ್ಯ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ: ನಾಯಕತ್ವ ಬದಲಾವಣೆ ಸಾಧ್ಯತೆ ತಳ್ಳಿಹಾಕಿದ ಬಿಜೆಪಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 

Published: 01st April 2022 11:52 AM  |   Last Updated: 01st April 2022 02:01 PM   |  A+A-


Amit Shah in Karnataka tour

ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ

ANI

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 

ಸಿದ್ದಗಂಗಾ ಮಠಕ್ಕೆ ಲಿಂಗಾಯತರ ಪ್ರಭಾವಿ ಕೇಂದ್ರ, ಕರ್ನಾಟಕದಲ್ಲಿ ಮುಂದಿನ ಏಪ್ರಿಲ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಸಹಜವಾಗಿ ಅಮಿತ್ ಶಾ ಭೇಟಿ ರಾಜಕೀಯವಾಗಿಯೂ ಮಹತ್ವ ಪಡೆದಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿರುವುದರಿಂದ ಈ ಹೊತ್ತಿನಲ್ಲಿ ನಾಯಕತ್ವ ಬದಲಾವಣೆ ಮಾಡಿ ಅದರ ಒತ್ತಡವನ್ನು ಭರಿಸಿಕೊಳ್ಳುವ ಮನಸ್ಥಿತಿಯಲ್ಲಿ ಬಿಜೆಪಿ ಹೈಕಾಂಡ್ ಇಲ್ಲ ಎನ್ನುತ್ತವೆ ಮೂಲಗಳು.

ಕಳೆದ ತಡರಾತ್ರಿ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವು ಇತರ ನಾಯಕರು ಬರಮಾಡಿಕೊಂಡರು.

ಇಂದು ಅಪರಾಹ್ನ 2.20 ರ ಸುಮಾರಿಗೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ 200 ಹಾಸಿಗೆಗಳ ಆಸ್ಪತ್ರೆಯ ಶಂಕುಸ್ಥಾಪನೆ ಸೇರಿದಂತೆ ರಾಜ್ಯದ ಇತರ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಸಂಜೆ 4 ಗಂಟೆ ಸುಮಾರಿಗೆ ಕರ್ನಾಟಕ ರಾಜ್ಯ ಸಹಕಾರಿ ಸಮ್ಮೇಳನದಲ್ಲಿ ಶಾ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಬೆಂಗಳೂರು ಭೇಟಿ: ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ಸೂಚನೆಯೇ?

ನಂತರ ಬಿಜೆಪಿ ಕೋರ್ ಗ್ರೂಪ್ ಜೊತೆ ಸಭೆ ನಡೆಯಲಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಸೇರಿದಂತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬಹುದು ಎಂಬ ಹಲವು ಸುತ್ತಿನ ಊಹಾಪೋಹಗಳು ಎದ್ದಿರುವ ಹಿನ್ನೆಲೆಯಲ್ಲಿ ಈ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ಉಸ್ತುವಾರಿಯಾಗಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರೊಂದಿಗೆ ಕೋರ್ ಗ್ರೂಪ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬಿಜೆಪಿಯ ಉನ್ನತ ಮೂಲಗಳು, ಎಎನ್‌ಐ ಸುದ್ದಿಸಂಸ್ಥೆ ಜೊತೆ ಮಾತನಾಡುತ್ತಾ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿವೆ. ''ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ, ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಪೂರ್ಣಾವಧಿ ಪೂರೈಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಸಾಧ್ಯತೆಯ ಬಗ್ಗೆ ಮಾತುಕತೆ ನಡೆದಿದ್ದು, ಯಾವುದೇ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಮತ್ತೊಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷವನ್ನು ಬಲಪಡಿಸುವ ಸಲುವಾಗಿ ರಾಜ್ಯಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಗುರುವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.


Stay up to date on all the latest ರಾಜಕೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp