ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಸಿಟಿ.ರವಿ
ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published: 02nd April 2022 01:35 PM | Last Updated: 04th April 2022 01:10 PM | A+A A-

ಸಿಟಿ ರವಿ
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋರ್ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಸಿಟಿ ರವಿಯವರು ಮಾತನಾಡಿದರು.
ಒಂದು ವರ್ಷಕ್ಕೆ ಮಾರ್ಗಸೂಚಿ ಸಿದ್ಧಪಡಿಸಿ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಅಮಿತ್ ಶಾ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ಸಭೆಯಲ್ಲಿ ಇಂದಿನ ರಾಜಕೀಯ ಪ್ರಸ್ತುತದ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಾಯಿತು. ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಪರ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಕಾಂಗ್ರೆಸ್ ಭೀತಿ ಶುರುವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡಿದರೆ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ಆತ್ಮಸ್ಥೈರ್ಯವನ್ನು ಸಭೆಯಲ್ಲಿ ಮೂಡಿಸಿದ್ದಾರೆ. ಒಂದು ವರ್ಷಕ್ಕೆ ಮಾರ್ಗಸೂಚಿ ಸಿದ್ಧಪಡಿಸುವಂತೆ ಅಮಿತ್ ಶಾ ಸೂಚನೆ ನೀಡಿದ್ದಾರೆಂದು ಹೇಳಿದರು.
ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ನೀಲ ನಕ್ಷೆ ಸಿದ್ದಪಡಿಸಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ
ಪಕ್ಷದ ಅಧ್ಯಕ್ಷರಿಂದ ಸೂಚನೆ ಪಡೆದ ಬಳಿಕ ಬಿಜೆಪಿ ಸೇರಲು ಇಚ್ಛಿಸುವ ನಾಯಕರ ಹೆಸರನ್ನು ಪಕ್ಷ ಅಂತಿಮಗೊಳಿಸಲಿದೆ ಎಂದು ತಿಳಿಸಿದರು.
ಇದೇ ವೇಳೆ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿರುವುದು ಹಾಗೂ ನಾಯಕತ್ವ ಬದಲಾವಣೆ ಕುರಿತ ವದಂತಿಗಳನ್ನು ಸಿಟಿ ರವಿಯವರು ನಿರಾಕರಿಸಿದರು. "ಚುನಾವಣೆಗೆ ನಾವು ಸಿದ್ಧರಿದ್ದೇವೆ. ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಾಯಕತ್ವ ಬದಲಾವಣೆ ಬಗ್ಗೆಯೂ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.