ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಹೈಕಮಾಂಡ್ ಮನೆಯಲ್ಲಿ ಕೂರಿಸಿದೆ: ಇನ್ನು ವಿಜಯೇಂದ್ರ ಯಾವ ಗಿಡದ ತಪ್ಪಲು?
ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಹೈಕಮಾಂಡ್ ಮನೆಯಲ್ಲಿ ಕೂರಿಸಿದೆ, ಇನ್ನು ವಿಜಯೇಂದ್ರ ಯಾವ ಗಿಡದ ತಪ್ಪಲು? ವಿಜಯೇಂದ್ರ ಮೊನ್ನೆ ಮೊನ್ನೆ ನಮ್ಮ ಮುಂದೆಯೇ ಹುಟ್ಟಿದ ಹುಡುಗ..
Published: 11th April 2022 08:56 AM | Last Updated: 11th April 2022 01:02 PM | A+A A-

ಬಿ.ವೈ ವಿಜಯೇಂದ್ರ
ವಿಜಯಪುರ: ನನ್ನಿಂದಲೇ ಬಿಜೆಪಿ ಎನ್ನುವವರನ್ನೇ ಹೈಕಮಾಂಡ್ ಮನೆಯಲ್ಲಿ ಕೂರಿಸಿದೆ, ಇನ್ನು ವಿಜಯೇಂದ್ರ ಯಾವ ಗಿಡದ ತಪ್ಪಲು? ವಿಜಯೇಂದ್ರ ಮೊನ್ನೆ ಮೊನ್ನೆ ನಮ್ಮ ಮುಂದೆಯೇ ಹುಟ್ಟಿದ ಹುಡುಗ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಭಾನುವಾರ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಇನ್ನು ಮುಂದೆ ವಂಶಪಾರಂಪರೆಗೆ ಅವಕಾಶವಿಲ್ಲ, ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ- ಸಿದ್ದರಾಮಯ್ಯ
ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು. ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಸ್ಥಳ ನನಗೆ ಕೊಡಿ ಎನ್ನುವುದು ಇನ್ನು ಮುಂದೆ ಯಾವುದೂ ಉಳಿಯುವುದಿಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದರೂ ಉದ್ಯೋಗ ಮಾಡಿಕೊಂಡಿದ್ದರೆ ಅದರಲ್ಲಿ ಮುಂದುವರೆಯುವುದು ಒಳ್ಳೆಯದು ಎಂದು ಅವರು ಟಾಂಗ್ ಕೊಟ್ಟಿದ್ದಾರೆ.