ಅಘೋಷಿತ 'ಕೆಪಿಸಿಸಿ ಅಧ್ಯಕ್ಷೆ' ಕ್ಷೇತ್ರದಲ್ಲಿ ನಡೆದ ಬೇನಾಮಿ ಕಾಮಗಾರಿಗೆ ಕಾಂಗ್ರೆಸ್ ಮಾಜಿ ಕಾರ್ಯಕರ್ತ ಬಲಿ? ಕಾಂಗ್ರೆಸ್ ಟೂಲ್ ಕಿಟ್ ಭಾಗ!
ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು ಎಂದು ಬಿಜೆಪಿ ಹೇಳಿದೆ.
Published: 13th April 2022 02:14 PM | Last Updated: 13th April 2022 02:17 PM | A+A A-

ಸಂತೋಷ್ ಪಾಟೀಲ್
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು ಎಂದು ಬಿಜೆಪಿ ಹೇಳಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಮೃತ ಸಂತೋಷ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದೇ ವಿಷಯವಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು. ಇದು ಕಾಕತಾಳಿಯವಾಗಲು ಹೇಗೆ ಸಾಧ್ಯ? ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನ ಸೃಷ್ಟಿಸಿದೆ. ಇದು ಕಾಂಗ್ರೆಸ್ ಪಕ್ಷದ "ಬೇನಾಮಿ ಅಧ್ಯಕ್ಷೆ" ಹಾಗೂ "ಮಹಾನಾಯಕ" ಸೃಷ್ಟಿಸಿದ "ಮಹಾಕೈವಾಡವೇ"? ಅಘೋಷಿತ ಕೆಪಿಸಿಸಿ ಅಧ್ಯಕ್ಷೆಯ ಕ್ಷೇತ್ರದಲ್ಲಿ ನಡೆದ ಬೇನಾಮಿ ಕಾಮಗಾರಿಗೆ ಕಾಂಗ್ರೆಸ್ ಮಾಜಿ ಕಾರ್ಯಕರ್ತ ಬಲಿಯಾದರೆ? ಎಂದು ಪ್ರಶ್ನಿಸಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನ ಸೃಷ್ಟಿಸಿದೆ.
— BJP Karnataka (@BJP4Karnataka) April 13, 2022
ಇದು ಕಾಂಗ್ರೆಸ್ ಪಕ್ಷದ "ಬೇನಾಮಿ ಅಧ್ಯಕ್ಷೆ" ಹಾಗೂ "ಮಹಾನಾಯಕ" ಸೃಷ್ಟಿಸಿದ "ಮಹಾಕೈವಾಡವೇ"?
ಅಘೋಷಿತ ಕೆಪಿಸಿಸಿ ಅಧ್ಯಕ್ಷೆಯ ಕ್ಷೇತ್ರದಲ್ಲಿ ನಡೆದ ಬೇನಾಮಿ ಕಾಮಗಾರಿಗೆ ಕಾಂಗ್ರೆಸ್ ಮಾಜಿ ಕಾರ್ಯಕರ್ತ ಬಲಿಯಾದರೆ?#40PercentCONgressToolkit
40% ಕಮಿಷನ್ ಆರೋಪ ಕಾಂಗ್ರೆಸ್ ಪಕ್ಷ ಸೃಷ್ಟಿಸಿದ ಬಹುದೊಡ್ಡ ಟೂಲ್ ಕಿಟ್. ಈ ಷಡ್ಯಂತ್ರವನ್ನು ಪೋಷಿಸುವುದಕ್ಕಾಗಿ ಕಾಂಗ್ರೆಸ್ ಖಳನಾಯಕರು ಮಗದೊಂದು ಪ್ರಹಸನ ಹೆಣೆದರೇ? ಸಾವಿನ ರಾಜಕಾರಣಕ್ಕೆ ಕಾಂಗ್ರೆಸ್ ಮುನ್ನುಡಿ ಬರೆಯುತ್ತಿದೆಯೇ? ಅನುಮೋದನೆ ಇಲ್ಲದೆಯೇ ನೂರಕ್ಕೂ ಹೆಚ್ಚು ಕಾಮಗಾರಿ ನಡೆಸಿದ್ದ ಸಂತೋಷ್. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಯಲ್ಲ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳಿಂದ ಸ್ಪಷ್ಟನೆ, ಅನಧಿಕೃತ ಕಾಮಗಾರಿಯ ಹಿಂದೆ ಕೆಪಿಸಿಸಿಯ "ಅಘೋಷಿತ ಅಧ್ಯಕ್ಷೆಯ" ಪಾತ್ರವೇನು? ಎಂದು ಬಿಜೆಪಿ ತಪರಾಕಿ ಹಾಕಿದೆ.
ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತೆರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮೆತ್ತಗಿನ ಮನುಷ್ಯನೇ? ಇದರ ಹಿಂದೆ ಕಾಂಗ್ರೆಸ್ ಟೂಲ್ ಕಿಟ್ ಕೈವಾಡವಿದೆ. ಅರಾಜಕತೆ ಸೃಷ್ಟಿಸಲು ಮುಗ್ದರನ್ನು ಕಾಂಗ್ರೆಸ್ ನಾಯಕರು ಬಳಸಿಕೊಳ್ಳುತ್ತಿದ್ದಾರೆಯೇ? ಸಂತೋಷ್ ಪ್ರಕರಣ ಕಾಂಗ್ರೆಸ್ ಟೂಲ್ ಕಿಟ್ ನ ಭಾಗ ಎಂಬುದಕ್ಕೆ ಹಲವಾರು ದೃಷ್ಟಾಂತಗಳಿವೆ.
ಸಂತೋಷ್ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತ, ಸಂತೋಷನಿಂದ ರಾಹುಲ್ ಗಾಂಧಿ ಸಹಿ ನಕಲು, 40% ಕಮಿಷನ್ ಕಾಂಗ್ರೆಸ್ ಸೃಷ್ಟಿ, ಸಂತೋಷ್ ಪಾಟೀಲನಿಂದಲೂ 40% ಕಮಿಷನ್ ಪ್ರಸ್ತಾಪ, ಕಾರ್ಯಾದೇಶ ಇಲ್ಲದೇ ಕಾಮಗಾರಿ, ಕೆಪಿಸಿಸಿ "ಅಘೋಷಿತ ಅಧ್ಯಕ್ಷೆಯ" ಕ್ಷೇತ್ರದಲ್ಲಿ ಕಾಮಗಾರಿ ಈಗ ಮೃತನ ಪರ ಬ್ಯಾಟಿಂಗ್ ಮೃತ ವ್ಯಕ್ತಿಯ ಎಲ್ಲಾ ವಿಚಾರಗಳು "ಮಹಾನಾಯಕ" ಮತ್ತು "ಬೇನಾಮಿ ಅಧ್ಯಕ್ಷೆಯ" ಸುತ್ತ ಸುತ್ತುತ್ತಿರುವುದು ನಿಜವಲ್ಲವೇ? ಎಂದು ಬಿಜೆಪಿ ಕೇಳಿದೆ.
√ ಮೃತ ಸಂತೋಷ್ ಈ ಹಿಂದೆ ರಾಹುಲ್ ಗಾಂಧಿ ಸಹಿ ನಕಲು ಮಾಡಿದ್ದು ನಿಜವೇ?
— BJP Karnataka (@BJP4Karnataka) April 13, 2022
√ ಈ ಕಾರಣಕ್ಕಾಗಿ ಆತನನ್ನು ಕಾಂಗ್ರೆಸ್ಸಿನಿಂದ ಉಚ್ಛಾಟನೆ ಮಾಡಿದ್ದು ಸುಳ್ಳೇ?
√ ಆತ ಕಾಂಗ್ರೆಸ್ಸಿನ "ಬೇನಾಮಿ ಅಧ್ಯಕ್ಷರಿಗೆ" ನಿಷ್ಠನಾಗಿದ್ದದ್ದು ಸುಳ್ಳೇ?
ಇದು "ಬೇನಾಮಿ ಅಧ್ಯಕ್ಷೆ" ಹಾಗೂ "ಮಹಾನಾಯಕ" ಪೋಣಿಸಿರುವ ಷಡ್ಯಂತ್ರವೇ?#40PercentCONgressToolkit
ಮೃತ ಸಂತೋಷ್ ಈ ಹಿಂದೆ ರಾಹುಲ್ ಗಾಂಧಿ ಸಹಿ ನಕಲು ಮಾಡಿದ್ದು ನಿಜವೇ? ಈ ಕಾರಣಕ್ಕಾಗಿ ಆತನನ್ನು ಕಾಂಗ್ರೆಸ್ಸಿನಿಂದ ಉಚ್ಛಾಟನೆ ಮಾಡಿದ್ದು ಸುಳ್ಳೇ? ಆತ ಕಾಂಗ್ರೆಸ್ಸಿನ "ಬೇನಾಮಿ ಅಧ್ಯಕ್ಷರಿಗೆ" ನಿಷ್ಠನಾಗಿದ್ದದ್ದು ಸುಳ್ಳೇ? ಇದು "ಬೇನಾಮಿ ಅಧ್ಯಕ್ಷೆ" ಹಾಗೂ "ಮಹಾನಾಯಕ" ಪೋಣಿಸಿರುವ ಷಡ್ಯಂತ್ರವೇ? ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ ಕಾರಿದೆ.
√ ಅನುಮೋದನೆ ಇಲ್ಲದೆಯೇ ನೂರಕ್ಕೂ ಹೆಚ್ಚು ಕಾಮಗಾರಿ ನಡೆಸಿದ್ದ ಸಂತೋಷ್.
— BJP Karnataka (@BJP4Karnataka) April 13, 2022
√ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಯಲ್ಲ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳಿಂದ ಸ್ಪಷ್ಟನೆ.
ಅನಧಿಕೃತ ಕಾಮಗಾರಿಯ ಹಿಂದೆ ಕೆಪಿಸಿಸಿಯ "ಅಘೋಷಿತ ಅಧ್ಯಕ್ಷೆಯ" ಪಾತ್ರವೇನು?#40PercentCONgressToolkit