ಪಂಚ ರಾಜ್ಯ ಚುನಾವಣೆಗಳಲ್ಲಿ ಜನರಿಂದ ರಾಷ್ಟ್ರೀಯ ಪಕ್ಷ ತಿರಸ್ಕಾರ: ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್!
ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಇದೀಗ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Published: 13th April 2022 08:57 AM | Last Updated: 13th April 2022 12:57 PM | A+A A-

ಎಚ್.ಡಿ ಕುಮಾರಸ್ವಾಮಿ
ರಾಮನಗರ: ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಇದೀಗ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಜನತಾ ಜಲಧಾರೆಯ ರೂಪುರೇಷೆ ಹಾಗೂ ಜೆಡಿಎಸ್ ಪಕ್ಷ ತೊರೆದವರು ಪುನಃ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, ಕೆಲ ಸಣ್ಣ ಪುಟ್ಟ ದೋಷಗಳಿಂದ ಪಕ್ಷದಿಂದ ಕೆಲವರು ದೂರ ಹೋಗಿದ್ದರು. ಪಕ್ಷದ ಕಾರ್ಯವೈಖರಿ, ಪಕ್ಷದ ಸಿದ್ದಾಂತ ಒಪ್ಪಿ ಬರುವವರು ಮತ್ತೆ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಈ ಹಿಂದೆ ಕೆಲವರು ಜೆಡಿಎಸ್ ಮುಳುಗೆ ಹೋಯ್ತು ಎಂದು ಕೆಲವರು ಹೇಳುತ್ತಿದ್ದರು. ಈಗ ಅನೇಕ ಸಂಘ ಸಂಸ್ಥೆಗಳು, ಕಾರ್ಯಕರ್ತರು ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ಸಮೀಕ್ಷೆ ಮಾಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಗೆಲ್ಲುವಂತ ನಾಯಕರನ್ನು ಅವರ ಪಕ್ಷಕ್ಕೆ ಸೆಳೆಯಲು ಮುಂದಾಗ್ತಿದ್ದಾರೆ.
ಇದನ್ನೂ ಓದಿ: ಹಲಾಲ್- ಹಿಜಾಬ್ ವಿರುದ್ಧ ಸಂಘರ್ಷದ ಜೊತೆಗೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯಗೊಳಿಸಲು ಕುಮಾರಸ್ವಾಮಿ ಸಿದ್ಧತೆ!
ಎರಡು ಪಕ್ಷದ ನಾಯಕರು ನಮ್ಮ ಪಕ್ಷದ ಮುಖಂಡರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ನಮ್ಮ ಪಕ್ಷ ಬಿಟ್ಟು ಹೋದ ಶಾಸಕರ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ನಾಯಕರನ್ನು ಕಾರ್ಯಕರ್ತರು ಸೃಷ್ಟಿಮಾಡಿದ್ದಾರೆ. ಜೆಡಿಎಸ್ ತೊರೆದವರು ಪಕ್ಷ ಸೇರುವ ಕುರಿತು ಪಕ್ಷದಲ್ಲೇ ಹಿರಿಸು ಮುರಿಸು ಇದೆ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಇದೀಗ ಸೃಷ್ಟಿಯಾಗಿದೆ. ಪ್ರಾದೇಶಿಕ ಪಕ್ಷಗಳು ಒಬ್ಬ ವ್ಯಕ್ತಿ ತೆಗೆದುಕೊಳ್ಳುವ ನಿಲುವು ಏನಿದೆ ಅನ್ನೊದರ ಮೇಲೆ ಆ ಪಕ್ಷ ಮೇಲೆ ಬರಲಿದೆ. ನನ್ನ ಈಗಿನ ನಿಲುವಿನ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕಾರ ಮಾಡಿದ್ದಾರೆ.
ನಮ್ಮ ರಾಜ್ಯದಲ್ಲೂ ಯಾವ ಎಎಪಿ ಇರಲಿ ಯಾವುದೇ ಬಂದ್ರೂ ಜನತಾದಳವೇ ಇಲ್ಲಿ ಮುಖ್ಯ. ವಿಷಯಾಧಾರಿತ ವಿಚಾರ ಮುಂದಿಟ್ಟುಕೊಂಡು ಜನರ ಮುಂದೆ ಹೋಗ್ತಿದ್ದೇನೆ. ಜನರು ನನ್ನ ವಿಚಾರಗಳನ್ನು ಒಪ್ಪಿಕೊಳ್ತಾರೆ ಎಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಗಡಿ ಶಾಸಕರಾದ ಮಂಜುನಾಥ್ ಹಾಜರಿದ್ದರು.