ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡ: ರಮೇಶ್ ಜಾರಕಿಹೊಳಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ.
Published: 14th April 2022 04:42 PM | Last Updated: 14th April 2022 05:53 PM | A+A A-

ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ವಿರುದ್ಧ ಆರೋಪ ಮಾಡಿ, ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಈ ಪ್ರಕರಣದಲ್ಲಿ ಏನಾಗಿದೆ ಎನ್ನುವುದು ನನಗೆ ಸಂಪೂರ್ಣವಾಗಿ ಗೊತ್ತಿದೆ. ಈ ಪ್ರಕರಣದಲ್ಲಿ ರಾಜಕಾರಣ ಮಾಡಲಾಗುತ್ತಿದೆ. ನಿಜವಾದ ಸಂಗತಿಯನ್ನು ಶೀಘ್ರವೇ ಬಹಿರಂಗಪಡಿಸುತ್ತೇನೆ ಎಂದರು.
ಇದನ್ನೂ ಓದಿ: ಸಚಿವ ಕೆ ಎಸ್ ಈಶ್ವರಪ್ಪ ಬಂಧನಕ್ಕೆ ಆಗ್ರಹ; ಕಾಂಗ್ರೆಸ್ ನಾಯಕರಿಂದ ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಯತ್ನ; ಪೊಲೀಸರ ವಶ
ಸಿ. ಡಿ. ಪ್ರಕರಣದಲ್ಲಿ ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಭಾಗಿಯಾದ ತಂಡವೇ ಈಗ ಈಶ್ವರಪ್ಪ ಅವರ ವಿರುದ್ಧವೂ ಕೆಲಸ ಮಾಡುತ್ತಿದೆ. ತನಿಖೆ ನಡೆಯಲಿ, ಈಶ್ವರಪ್ಪ ಅವರ ತಪ್ಪಿದ್ದರೆ ಬೇಕಾದ ಶಿಕ್ಷೆಯಾಗಲಿ. ಅಲ್ಲಿಯವರೆಗ ರಾಜೀನಾಮೆ ಕೊಡಬಾರದು. ಈ ಎರಡು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.