ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಕೊಟ್ಟಾಯ್ತು, ಈಗ ಬಂಧನಕ್ಕೆ ಕಾಂಗ್ರೆಸ್ ಬಿಗಿಪಟ್ಟು; ಪ್ರತಿತಂತ್ರ ಹೆಣೆಯುತ್ತಿರುವ ಕೇಸರಿ ಪಡೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರ ಹೆಸರು ಬಂದು ಆರೋಪಕ್ಕೆ ಗುರಿಯಾಗಿರುವುದರಿಂದ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯಾಗಿದೆ. ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದರು.
Published: 16th April 2022 09:48 AM | Last Updated: 16th April 2022 01:13 PM | A+A A-

ಕೆ ಎಸ್ ಈಶ್ವರಪ್ಪ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಎಸ್ ಈಶ್ವರಪ್ಪನವರ ಹೆಸರು ಬಂದು ಆರೋಪಕ್ಕೆ ಗುರಿಯಾಗಿರುವುದರಿಂದ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿಯಾಗಿದೆ. ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದರು.
ಇದೀಗ ಅಷ್ಟಕ್ಕೇ ಸುಮ್ಮನಾಗದ ಕಾಂಗ್ರೆಸ್ ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸುತ್ತಿದೆ. ಅವರ ಬಂಧನವಾಗುವವರೆಗೆ ಬಿಡುವುದಿಲ್ಲ, ರಾಜ್ಯಾದ್ಯಂತ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ಇದನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿದೆ.
ಕೇಸರಿ ಪಡೆ ಪಟ್ಟು: ಇನ್ನೊಂದೆಡೆ ಈಶ್ವರಪ್ಪ ಪರ ನಿಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ ಮಂತ್ರಿಳು, ಶಾಸಕರು ಕಾಂಗ್ರೆಸ್ ವಿರುದ್ಧ ಅಸ್ತ್ರ ಹೆಣೆಯಲು ಸಿದ್ಧವಾಗಿದೆ. ಈ ಪ್ರಕರಣದಲ್ಲಿ ಮಹಾದಂಡನಾಯಕನ ಪಾತ್ರವಿದೆ ಎಂದು ಬಾಂಬ್ ಎಸೆದಿದ್ದ ರಮೇಶ್ ಜಾರಕಿಹೊಳಿ ನಾಡಿದ್ದು ಸೋಮವಾರ ಇದಕ್ಕೆ ಸಂಬಂಧಪಟ್ಟಂತೆ ಸ್ಫೋಟಕ ವಿಷಯ ಬಹಿರಂಗಪಡಿಸುತ್ತಾರೆಯೇ ಎಂಬುದು ಕುತೂಹಲವಾಗಿದೆ.
ಇದನ್ನೂ ಓದಿ: ಆರ್ ಡಿಪಿಆರ್ ಸಚಿವರ ರಾಜೀನಾಮೆ ಪತ್ರ ರಾಜ್ಯಪಾಲರಿಗೆ ವರ್ಗ, ನಿರ್ದೋಷಿಯಾಗಿ ಹೊರಗೆ ಬರ್ತೀನಿ ಎಂದ ಈಶ್ವರಪ್ಪ!
ಒಟ್ಟಿನಲ್ಲಿ ರಾಜಕೀಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಪರಸ್ಪರ ಆರೋಪ-ಪ್ರತ್ಯಾರೋಪ, ತೀವ್ರ ಕಿತ್ತಾಟಕ್ಕೆ ವೇದಿಕೆಯಾಗುವುದರಲ್ಲಿ ಸಂಶಯವಿಲ್ಲ.