
ಎಚ್.ಕೆ ಕುಮಾರಸ್ವಾಮಿ
ಹಾಸನ: ಏಪ್ರಿಲ್ 17 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಎಚ್. ಕೆ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದರು.
ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಲು ಸಿದ್ಧ ಎಂದು ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಎಚ್.ಡಿ.ದೇವೇಗೌಡ ಹಾಗೂ ಹಿರಿಯ ನಾಯಕರ ಸಮ್ಮುಖದಲ್ಲಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಇರುವುದು ಗೊಡ್ಡು ಎಮ್ಮೆಗಳು, ಸಿದ್ದರಾಮಯ್ಯರನ್ನು ನಂಬಿ ಕೆಟ್ಟೆ: ಸಿ.ಎಂ.ಇಬ್ರಾಹಿಂ
ಸಿಎಂ ಇಬ್ರಾಹಿಂ ಅವರು ಜೆಡಿಎಸ್‌ನ ಆಸ್ತಿಯಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಸಿ.ಎಂ.ಇಬ್ರಾಹಿಂ ಅವರೊಂದಿಗೆ ಕೈಜೋಡಿಸುವುದಾಗಿ ತಿಳಿಸಿದರು.
ಎಚ್.ಕೆ ಕುಮಾರಸ್ವಾಮಿ ಅವರು ರಾಜ್ಯಾಧ್ಯಕ್ಷರಾಗಿ ಯಾವುದೇ ಅಡೆತಡೆಯಿಲ್ಲದೆ ಸೇವೆ ಸಲ್ಲಿಸಿದ್ದು, ಹಿರಿಯ ನಾಯಕರು ಯಾವುದೇ ಸಂದರ್ಭದಲ್ಲೂ ತಮಗೆ ಅವಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.