ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ: ಹೆಚ್.ಡಿ.ಕುಮಾರಸ್ವಾಮಿ
ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.
Published: 17th April 2022 01:15 PM | Last Updated: 17th April 2022 01:15 PM | A+A A-

ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸಂಭವಿಸಿದ ಉದ್ವಿಗ್ನ ಪರಿಸ್ಥಿತಿ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.