ಹೊಸಪೇಟೆಗಿಂದು ಜೆಪಿ ನಡ್ಡಾ ಭೇಟಿ: ಕಾರ್ಯಕಾರಿಣಿ ಸಮಾರೋಪದಲ್ಲಿ ಭಾಗಿ, ಸಂಪುಟ ಪುನಾರಚನೆ ಕುರಿತ ಚರ್ಚೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭಾನುವಾರ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.

Published: 17th April 2022 09:52 AM  |   Last Updated: 18th April 2022 01:15 PM   |  A+A-


JP nadda

ಜೆ.ಪಿ.ನಡ್ಡಾ

The New Indian Express

ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭಾನುವಾರ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.

ಎಪ್ರಿಲ್ 6 ರಂದು ನವದೆಹಲಿಯಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿದ್ದ ಬೊಮ್ಮಾಯಿ, ಶುಕ್ರವಾರ ಸಚಿವ ಸಂಪುಟ ಪುನಾರಚನೆ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿರುವುದಾಗಿ ಹೇಳಿಕೊಂಡಿದ್ದರು, ಇದೇ ವೇಳೆ ಕಾರ್ಯಕಾರಿ ಸಭೆ ವೇಳೆಯೂ ಈ ಕುರಿತು ಚರ್ಚಿಸುವ ಬಗ್ಗೆ ಸುಳಿವು ನೀಡಿದ್ದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಕೆಎಸ್ ಈಶ್ವರಪ್ಪ ಅವರು ಭ್ರಷ್ಟಾಚಾರ ಆರೋಪದ ಮೇಲೆ ಸಚಿವ ಸಂಪುಟದಿಂದ ಹೊರಗೆ ನಡೆದಿದ್ದು, ಈ ಬಾರಿಯ ಸಂಪುಟ ಪುನಾರಚನೆಯಲ್ಲಿ ಹೊಸ ಮುಖಗಳನ್ನು ಸೇರ್ಪಡೆಗೊಳಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

“ಬಿಎಲ್ ಸಂತೋಷ್ ಅವರು ರಾಜ್ಯದ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸದಿದ್ದರೆ, ಕೆಲವು ಮಂತ್ರಿಗಳು, ಪ್ರಮುಖವಾಗಿ ಹಿರಿಯ ನಾಯಕರು ಬೊಮ್ಮಾಯಿ ಅವರನ್ನು ಹಲವಾರು ವಿಷಯಗಳಲ್ಲಿ ಕಡೆಗಣಿಸುತ್ತಿದ್ದರು. ಇದರಿಂದ ಸರ್ಕಾರ ಮತ್ತಷ್ಟು ಸಮಸ್ಯೆ ಎದುರಿಸುವ ಪರಿಸ್ಥಿತಿ ಎದುರಾಗುತ್ತಿತ್ತು. ಈ ಎಲ್ಲಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಕ್ಲೀನ್ ಇಮೇಜ್ ಹೊಂದಿರುವ ಯುವ ನಾಯಕರಿಗೆ ಹಿರಿಯ ನಾಯಕರು ದಾರಿ ಮಾಡಿಕೊಡಬೇಕಾಗಿದೆ ಎಂದು ಸಂತೋಷ್ ಅವರಿಗೆ ಆಪ್ತರಾಗಿರುವ ಆರ್'ಎಸ್ಎಸ್ ಮುಖಂಡರೊಬ್ಬರು ಹೇಳಿದ್ದಾರೆ.

ಗುತ್ತಿಗೆದಾರರ ಸಂಘವನ್ನು ಬಳಸಿಕೊಂಡು ಪ್ರತಿಪಕ್ಷ ಕಾಂಗ್ರೆಸ್ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೆಚ್ಚಿನ ಸಚಿವರ ಹೆಸರನ್ನು ಬಹಿರಂಗಪಡಿಸುತ್ತಿದ್ದು, ಈ ಬೆಳವಣಿಗೆಗಳಿಗೆ ಹೈಕಮಾಂಡ್ ಆತಂಕಗೊಳ್ಳುವಂತೆ ಮಾಡಿದೆ. 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಎದುರಾಗಲಿರುವ ಮುಜುಗರವನ್ನು ತಪ್ಪಿಸಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕತ್ವವು ಇರುವ ಉತ್ತಮ ಆಯ್ಕೆಗಳ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಸಂಭವವಾಗಿದೆ. ಏಕೆಂದರೆ, ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬೆಂಬಲವಿದ್ದು, ನಾಯಕತ್ವ ಬದಲಾವಣೆಯಾಗಿದ್ದೇ ಆದರೆ, ಇದು ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇದರ ಜೊತೆಗೆ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನೂ ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತಂತೆಯೂ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಪಕ್ಷದ ನಾಯಕತ್ವ ಬಲಪಡಿಸುವುದಕ್ಕಾಗಿ ಶೋಭಾ ಕರಂದ್ಲಾಜೆ, ಸಿಟಿ ರವಿ, ಡಾ ಸಿ ಎನ್ ಅಶ್ವತ್ಥ್ ನಾರಾಯಣ, ಜಗದೀಶ್ ಶೆಟ್ಟರ್ ಅವರ ಹೆಸರುಗಳು ಕೆಲ ದಿನಗಳಿಂದ ಬಿಜೆಪಿ ವಲಯದಲ್ಲಿ ಸದ್ದು ಮಾಡುತ್ತಿದ್ದು, ಭಾನುವಾರ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯಗೊಂಡ ಬೆನ್ನಲ್ಲೇ ಸರ್ಕಾರ ಹಾಗೂ ಪಕ್ಷದಲ್ಲಾಗುವ ಬದಲಾವಣೆ ಕುರಿತ ಮಾಹಿತಿಗಳು ಬಹಿರಂಗಗೊಳ್ಳಲಿವೆ ಎಂದು ಹೇಳಲಾಗುತ್ತಿದೆ.


Stay up to date on all the latest ರಾಜಕೀಯ news
Poll
mallikarjuna kharge

ರಾಜಸ್ತಾನದಲ್ಲಿ ಪೈಲಟ್-ಗೆಹ್ಲೋಟ್ ನಡುವೆ ಬಿಕ್ಕಟ್ಟು; ಕೇರಳದಲ್ಲಿ ಸ್ವಪಕ್ಷದವರ ವಿರುದ್ಧ ತರೂರ್ ಫೈಟು: ಕಾಂಗ್ರೆಸ ಒಳಜಗಳ ಬಿಡಿಸಲು ಮಲ್ಲಿಕಾರ್ಜುನ ಖರ್ಗೆ ಗೆ ಸಾಧ್ಯವಾಗುವುದೇ?


Result
ಹೌದು
ಆಗದು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp