ಹೆಸರಿನಲ್ಲಿ 'ರಾಮ', ಉಂಡ ಮನೆಗೆ ಪಂಗನಾಮ: ಅಂತರಂಗದಲ್ಲಿ ಅಡ್ಜಸ್ಟ್‌ಮೆಂಟ್‌ವಾದಿ ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ!

ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಮುಖಂಡ ಎಚ್,ಡಿ ಕುಮಾರಸ್ವಾಮಿ ಹರಿ ಹಾಯ್ದಿದ್ದಾರೆ.

Published: 18th April 2022 12:36 PM  |   Last Updated: 18th April 2022 01:09 PM   |  A+A-


Hd Kumaraswamy And siddaramaiah

ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ

Online Desk

ಬೆಂಗಳೂರು: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ 'ಜೆಡಿಎಸ್ ಜ್ವರ' ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಮುಖಂಡ ಎಚ್,ಡಿ ಕುಮಾರಸ್ವಾಮಿ ಹರಿ ಹಾಯ್ದಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಹಾಸನದಲ್ಲಿ ವೃಥಾ ಹರಿಬಿಟ್ಟ 'ಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆ ಮತ್ತೆ ಕೆಣಕುವ ದುಸ್ಸಾಹಸ ಬೇರೆ. 

ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? 

ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್‌ʼಮೆಂಟ್‌ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? ಎಂದು ಲೇವಡಿ ಮಾಡಿದ್ದಾರೆ.

2008-2009: ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ರಾಜಕಾರಣದಲ್ಲಿ ಯಾರು ಸತ್ಯವಂತರು? ಕಾಂಗ್ರೆಸ್ ‌ನವರು ಏನೂ ಮಾಡಿಲ್ವೇ?: ಹೆಚ್.ಡಿ ದೇವೇಗೌಡ ಪ್ರಶ್ನೆ

ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ? 

ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ? ಧೈರ್ಯವಿದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ.ಆಪರೇಷನ್ ಕಮಲದ ಬಾಬ್ತಿನ ಹಣ ಸ್ವೀಕರಿಸಿ ನಿಮಗೆ ತಂದುಕೊಟ್ಟ ನಿಮ್ಮ ಆ ಹಳೆಯ ಸ್ನೇಹಿತರೇ ಸ್ವತಃ ನನ್ನ ಬಳಿ ಬಿಚ್ಚಟ್ಟ ಕಟುಸತ್ಯವಿದು! ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಅಬ್ಬಬ್ಬಾ.. ನಿಮಗೆ ನೀವೇ ಸಾಟಿ!

ಪಾಪ.. ಕಾಂಗ್ರೆಸ್ , ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ  ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ. 

ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ. ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.


Stay up to date on all the latest ರಾಜಕೀಯ news
Poll
Kharge-tharoor

ಕಾಂಗ್ರೆಸ್ ಎದುರಿಸುತ್ತಿರುವ ಸವಾಲುಗಳನ್ನು ನಿಭಾಯಿಸಲು ಯಾರು ಹೆಚ್ಚು ಸೂಕ್ತರು?


Result
ಮಲ್ಲಿಕಾರ್ಜುನ ಖರ್ಗೆ
ಶಶಿ ತರೂರ್

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp