ಪಿಎಸ್ಐ ನೇಮಕಾತಿ ಹಗರಣ: ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ಸಿ ವಿಶ್ವನಾಥ್ ಟೀಕೆ
ಪಿಎಸ್ಐ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್ ಅವರು, ರಾಜ್ಯ ಸರ್ಕಾರ ಪಾರದರ್ಶಕವಾಗಿ ಪ್ರಕ್ರಿಯೆ ನಡೆಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.
Published: 26th April 2022 07:57 AM | Last Updated: 26th April 2022 01:04 PM | A+A A-

ವಿಶ್ವನಾಥ್
ಮೈಸೂರು: ಪಿಎಸ್ಐ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಎಂಎಲ್ಸಿ ಎ.ಎಚ್.ವಿಶ್ವನಾಥ್, ರಾಜ್ಯ ಸರ್ಕಾರ ಪಾರದರ್ಶಕವಾಗಿ ಪ್ರಕ್ರಿಯೆ ನಡೆಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ನೇಮಕಾತಿ ಪರೀಕ್ಷೆಗಳು ಪಾವಿತ್ರ್ಯತೆ ಕಳೆದುಕೊಂಡಿದ್ದು, ಈಗ ಎಲ್ಲವೂ ಹಣದ ಮೇಲೆ ಅವಲಂಬಿತವಾಗಿದೆ. “ಹಣವು ಎಲ್ಲವನ್ನೂ ಆಳುತ್ತಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಸ್ನೇಹಿತ ಕೆಪಿಎಸ್ಸಿ ಸದಸ್ಯರಾಗಿದ್ದಾರೆ. ಅಂತಹವರು ಶಾಮೀಲಾದರೆ, ಕೆಪಿಎಸ್ಸಿಯನ್ನು ಸರಿಯಾಗಿ ನಿರ್ವಹಿಸುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ: ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಐಡಿ ಆಕ್ಷೇಪ
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ಒಬ್ಬ ಅಭ್ಯರ್ಥಿಯಿಂದ 30-40 ಲಕ್ಷ ರೂ ಪಡೆಯಲಾಗುತ್ತಿದೆ. ಕರ್ನಾಟಕದಲ್ಲಿ ಬುಲ್ಡೋಜರ್ ಸಂಸ್ಕೃತಿಯನ್ನು ಪರಿಚಯಿಸುತ್ತಿರುವುದು ಕೆಟ್ಟ ಸಂಕೇತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಎಲ್ಲಿಯಾದರೂ ಜನರು ಶಾಂತಿಯುತವಾಗಿ ಬದುಕಲು ಭರವಸೆ ನೀಡುವ ಹಕ್ಕುಗಳನ್ನು ಕಸಿದುಕೊಳ್ಳುವ ಹಕ್ಕನ್ನು ಇವರಿಗೆ ಯಾರು ನೀಡಿದ್ದಾರೆಂದು ಕೇಳಿದ್ದಾರೆ.
ಇದೇ ವೇಳೆ ಮುಸ್ಲಿಮರು ನಡೆಸುತ್ತಿರುವ ಆಭರಣ ಮಳಿಗೆಗಳ ಕುರಿತು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೀಡಿರುವ ಹೇಳಿಕೆಗೆ ವಿರುದ್ಧವೂ ವಿಶ್ವನಾಥ್ ವಾಗ್ದಾಳಿ ನಡೆಸಿದರು.