ಗಲಭೆ ನಿಯಂತ್ರಿಸಲು ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಗಳು ಕೆಲಸ ಮಾಡಿದೆ: ಜಗದೀಶ್ ಶೆಟ್ಟರ್
ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳನ್ನು ತಡೆಯಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದೊಂದಿಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆಂದು ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ.
Published: 26th April 2022 12:18 PM | Last Updated: 26th April 2022 01:52 PM | A+A A-

ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳನ್ನು ತಡೆಯಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ರಾಜ್ಯ ಸರ್ಕಾರದೊಂದಿಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆಂದು ಬಿಜೆಪಿ ಹಿರಿಯ ಮುಖಂಡ ಜಗದೀಶ ಶೆಟ್ಟರ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, ಈಗಾಗಲೇ ಕೆಲಸ ಸಚಿವರು ಸೇರಿದಂತೆ ಕರ್ನಾಟಕದ ಕೆಲವು ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಹೇಳಿದ್ದಾರೆ.
ಗಲಭೆ ತಡೆಯಲು ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಬುಲ್ಡೋಜರ್ ಪ್ರಯೋಗಗಳು ಕೆಲಸ ಮಾಡಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗಳು ಸುಧಾರಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಗಲಭೆ ಹತ್ತಿಕ್ಕಲು ಬುಲ್ಡೋಜರ್ ಪ್ರಯೋಗ ಅನಿವಾರ್ಯ, ಈ ಬಗ್ಗೆ ಚರ್ಚೆ ನಡೆಸುತ್ತೇವೆ: ಸಚಿವ ಆರ್.ಅಶೋಕ್
ಏಪ್ರಿಲ್ 16 ರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಗೊಂಡ ಪೋಸ್ಟ್ ವೊಂದು ಹಿಂಸಾಚಾರಕ್ಕೆ ಕಾರಣವಾಗಿದ್ದು, ಇದು ಪುರ್ವನಿಯೋಜಿತ ಕೃತ್ಯವಾಗಿದೆ ಎಂದು ಹೇಳಿದ್ದಾರೆ.
“ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಜನಸಮೂಹವನ್ನು ಪ್ರಚೋದಿಸಲಾಗಿದೆ. ಈ ಘಟನೆಯು ನಗರಕ್ಕೆ ಖಂಡಿತವಾಗಿಯೂ ಕೆಟ್ಟ ಹೆಸರು ತಂದಿದೆ ಮತ್ತು ಅಂತಹ ಶಕ್ತಿಗಳನ್ನು ನಿಗ್ರಹಿಸಬೇಕಾಗಿದೆ. ಇಂತಹ ಹಿಂಸಾಚಾರವು ಹುಬ್ಬಳ್ಳಿ ನಗರದ ಒಟ್ಟಾರೆ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.