ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!
2023ರ ವಿಧಾನಸಭಾ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 29 ರ ನಂತರ ನವದೆಹಲಿಯಲ್ಲಿ ಪಕ್ಷದ ವರಿಷ್ಠರು ಮತ್ತು ಆರೆಸ್ಸೆಸ್ ಮುಖಂಡರ ಸಭೆ ಕರೆಯುವ ಸಾಧ್ಯತೆಯಿದೆ.
Published: 27th April 2022 11:25 AM | Last Updated: 27th April 2022 12:56 PM | A+A A-

ಜೆಪಿ ನಡ್ಡಾ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಕ್ರಿಯಾ ಯೋಜನೆಯನ್ನು ರೂಪಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 29 ರ ನಂತರ ನವದೆಹಲಿಯಲ್ಲಿ ಪಕ್ಷದ ವರಿಷ್ಠರು ಮತ್ತು ಆರೆಸ್ಸೆಸ್ ಮುಖಂಡರ ಸಭೆ ಕರೆಯುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನವದೆಹಲಿ ಭೇಟಿಯು ನಂತರ ಸಭೆ ನಿಗದಿಪಡಿಸಬಹುದು ಎಂದು ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚಿಸುವುದಿಲ್ಲ, ಆದರೆ ಸಂಪುಟ ಪುನಾರಚನೆಯಿಂದಾಗಿ ಉಂಟಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲಾಗುವುದು, ಅದರಲ್ಲೂ ವಿಶೇಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಬಂಧ ಚರ್ಚೆ ನಡೆಯಲಿದೆ.
ವಿಧಾನಸಭೆ ಚುನಾವಣೆಗೆ ಸಂಪುಟ ವಿಸ್ತರಣೆ ಸಹಕಾರಿಯಾಗಲಿದೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ಮತ್ತು ಬೊಮ್ಮಾಯಿ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಕೂಡ ಸುಳಿವು ನೀಡಿದ್ದಾರೆ. ಹೀಗಾಗಿ ಸಂಪುಟದಲ್ಲಿ ತಮ್ಮ ಸೇರ್ಪಡೆ ಆಗಬಹುದು ಎಂದು ವಿಜಯೇಂದ್ರ ಭರವಸೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಕಾಂಗ್ರೆಸ್-ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಬೊಮ್ಮಾಯಿ ಅವರು ಏಪ್ರಿಲ್ 6 ರಂದು ನವದೆಹಲಿಗೆ ಭೇಟಿ ನೀಡಿದಾಗ, ನಡ್ಡಾ ಅವರೊಂದಿಗೆ ಸಂಪುಟ ಪುನಾರಚನೆಯ ಬಗ್ಗೆಸಂಕ್ಷಿಪ್ತವಾಗಿ ಚರ್ಚಿಸಿದ್ದಾರೆಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 16 ಮತ್ತು 17ರಂದು ಹೊಸಪೇಟೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲೂ ಸಂಪುಟ ಪುನಾರಚನೆಗೆ ಆದ್ಯತೆ ನೀಡಿರಲಿಲ್ಲ.
2023ರ ವಿಧಾನಸಭೆ ಚುನಾವಣೆ ಮತ್ತು ಅದರ ಸಂಬಂಧಿತ ಚರ್ಚೆಗಳು ನಡ್ಡಾ ಅವರ ಪ್ರಮುಖ ಆದ್ಯತೆಯಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಆರ್ಎಸ್ಎಸ್ ಮುಖಂಡರಾದ ದತ್ತಾತ್ರೇಯ ಹೊಸಬಾಳೆ, ಮುಕುಂದ್ ಮತ್ತಿತರರು ಭಾಗವಹಿಸಲಿದ್ದಾರೆ.
ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಲವು ಸೂಕ್ಷ್ಮ ವಿಷಗಳಿದೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ. ಆಡಳಿತವನ್ನು ಹೊರತುಪಡಿಸಿ ಕೇಂದ್ರ ನಾಯಕತ್ವವೂ ಯಾವುದೇ ರಾಜಕೀಯ ನಿರ್ಧಾರಗಳಿಗಾಗಿ ಬೊಮ್ಮಾಯಿ ಅವರನ್ನು ಅವರಲಿಂಬಿಸಿಲ್ಲ ಎಂದು ರಾಜ್ಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.