ಶೋಭಾ ಕರಂದ್ಲಾಜೆ, ಸಿಟಿ ರವಿ, ಅಶ್ವತ್ಥನಾರಾಯಣ ಯಾರು ಹಿತವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ?

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಮಾತ್ರ ಬಾಕಿಯಿದೆ, ಹೀಗಾಗಿ ಬಿಜೆಪಿ ತಾನು ಗೆಲ್ಲಲು ಅವಶ್ಯಕತೆಯಿರುವ ಎಲ್ಲಾ ಮಾರ್ಗಗಳನ್ನು ಸಿದ್ಧ ಪಡಿಸಿಕೊಳ್ಳುತ್ತಿದೆ.

Published: 29th April 2022 02:04 PM  |   Last Updated: 29th April 2022 02:20 PM   |  A+A-


Shoba karandlaje, ct ravi and ashwath narayana

ಶೋಭಾ ಕರಂದ್ಲಾಜೆ, ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣ

The New Indian Express

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಮಾತ್ರ ಬಾಕಿಯಿದೆ, ಹೀಗಾಗಿ ಬಿಜೆಪಿ ತಾನು ಗೆಲ್ಲಲು ಅವಶ್ಯಕತೆಯಿರುವ ಎಲ್ಲಾ ಮಾರ್ಗಗಳನ್ನು ಸಿದ್ಧ ಪಡಿಸಿಕೊಳ್ಳುತ್ತಿದೆ.

ಪ್ರಮುಖವಾಗಿ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಿದೆ. ಆ ಮೂಲಕ ಸರ್ಕಾರ ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡಲು ಮುಂದಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಂಗಾಯತ ಸಮುದಾಯದವರಾಗಿರುವುದರಿಂದ ಸಮಬಲ ಸಾಧಿಸಲು ಬಿಜೆಪಿ ದಕ್ಷಿಣ ಕರ್ನಾಟಕದಿಂದ ಒಕ್ಕಲಿಗ ನಾಯಕರೊಬ್ಬರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗರೂ ಆಗಿರುವ ಜೆಡಿಎಸ್‌ ಮತ್ತು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ಡಿಕೆ ಶಿವಕುಮಾರ್‌ ಅವರನ್ನು ಎದುರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ದೆಹಲಿ ಭೇಟಿ: ಮತ್ತೆ ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಕುರ್ಚಿ ಕನಸು

ಇದೀಗ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ನಾಯಕತ್ವ ಚಿಂತನೆ ನಡೆಸಿದೆ ಎನ್ನಲಾಗಿದೆ.

ಪ್ರಸ್ತುತ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಆಗಸ್ಟ್‌ನಲ್ಲಿ ಕೊನೆಗೊಳ್ಳಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೆಸರುಗಳೂ ಸದ್ದು ಮಾಡುತ್ತಿವೆ.

ಮಾಜಿ ಮುಖ್ಯಮಂತ್ರಿ ಮತ್ತು ಲಿಂಗಾಯತ ಪ್ರಬಲ ಬಿ ಎಸ್ ಯಡಿಯೂರಪ್ಪ ಇನ್ನೂ ಉತ್ಸಾಹವನ್ನು ತೋರಿಸುತ್ತಿರುವುದರಿಂದ, ಪಕ್ಷದ 2023 ರ ಪ್ರಚಾರವನ್ನು ಮುನ್ನಡೆಸಲು ಅವರಿಗೆ ಮನವಿ ಮಾಡಬಹುದು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಚಿಂತಕರ ಸಭೆ: ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ಚರ್ಚೆ!

ಲಿಂಗಾಯತರಿಗೆ ಪ್ರತ್ಯೇಕ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಹೋರಾಟ ನಡೆಸುತ್ತಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರನ್ನು ಎದುರಿಸಲು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಪ್ರಮುಖ  ಸ್ಥಾನ ನೀಡಬೇಕೆಂದು ಹೇಳಲಾಗುತ್ತಿದೆ.

ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸುನೀಲ್ ಕುಮಾರ್ ಮತ್ತು ಮಾಜಿ ಆರ್‌ಡಿಪಿಆರ್ ಸಚಿವ ಕೆ ಎಸ್ ಈಶ್ವರಪ್ಪ ಅವರ ಅನುಭವವನ್ನು ಬಳಸಿಕೊಳ್ಳಲು ಪಕ್ಷದ ಹೈಕಮಾಂಡ್ ಯೋಜಿಸಿದೆ.


Stay up to date on all the latest ರಾಜಕೀಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp