ಡಿಕೆಶಿ ನೋಟು, ಸಿದ್ದರಾಮಯ್ಯ ಸೂಟು: ಸಿದ್ದು ರಾಜಕೀಯ ಹೊಡೆತ ತಾಳಲಾರದೆ ಅಸಹಾಯಕ ಅಧ್ಯಕ್ಷ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ?

ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ ಅಸಹಾಯಕ ಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಎಂದು ಲೇವಡಿ ಮಾಡಿದೆ.

Published: 30th April 2022 11:58 AM  |   Last Updated: 30th April 2022 01:04 PM   |  A+A-


Dk Shivkumar And Siddaramaiah and mb patil

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

Online Desk

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ವಿರುದ್ಧ ಬಿಜೆಪಿ ಹರಿಹಾಯ್ದಿದೆ, ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಸಿದ್ದರಾಮಯ್ಯ ರಾಜಕೀಯ ಹೊಡೆತ ತಾಳಲಾರದೇ ಅಸಹಾಯಕ ಅಧ್ಯಕ್ಷ ಡಿಕೆಶಿ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆಯೇ? ಎಂದು ಲೇವಡಿ ಮಾಡಿದೆ.

ಡಿಕೆ ಶಿವಕುಮಾರ್ ಅವರೇ, ಹುಬ್ಬಳ್ಳಿ ಗಲಭೆಕೋರರಿಗೆ ಫುಡ್ ಕಿಟ್ ಹಂಚಲು ಹೋದ ಜಮೀರ್ ಅವರಿಗೆ ನೊಟೀಸ್‌ ನೀಡುವುದು ಬಿಟ್ಟು ಅಂತರ ಕಾಯ್ದುಕೊಂಡಿದ್ದೇಕೆ? ಮಾನ್ಯ ಡಿಕೆ ಶಿವಕುಮಾರ್ ಅವರೇ, ಪಕ್ಷ ಮುನ್ನಡೆಸುವುದಕ್ಕೂ ಸಾಮರ್ಥ್ಯ ಬೇಕು. ಪದೇ ಪದೇ ನಿಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವ ಸಿದ್ದರಾಮಯ್ಯ ಬಣದ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಂಜುವ ನೀವು ಅಸಹಾಯಕ ಅಧ್ಯಕ್ಷರೇ? ಎಂದು ಪ್ರಶ್ನಿಸಿದೆ.

ಅಧಿಕಾರದಲ್ಲಿದ್ದಾಗ ಸಮಾಜ ಘಾತುಕ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿದಿರಿ. ಕಾಂಗ್ರೆಸ್‌ ಪಕ್ಷದ ಕೃಪಾಶೀರ್ವಾದದಿಂದ ಬೆಳೆದ ಅದೇ ಮತಾಂಧರು ಸಮಾಜ ಘಾತುಕ ಚಟುವಟಿಕೆಗಳಲ್ಲಿ ಈಗ ತೊಡಗಿಸಿಕೊಂಡಿದ್ದಾರೆ. ನೀವೇ ಬೆಳೆಸಿದ ಸಂಘಟನೆಗಳನ್ನು ಈಗ ನಿಷೇಧಿಸಿ ಎನ್ನುವುದಕ್ಕೆ ಅರ್ಥವಿದೆಯೇ?

ಮಾನ್ಯ ಡಿಕೆ ಶಿವಕುಮಾರ್ ಅವರೇ, ನಿಮ್ಮ ಸದಾರಮೆ ನಾಟಕವನ್ನು ನಿಲ್ಲಿಸಿ. ಹಿಜಾಬ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುತ್ತಲೇ ಕಾನೂನು ಹೋರಾಟಕ್ಕೆ ನೇರವಾಗಿ ಸಹಕರಿಸಿದಿರಿ. ಹರ್ಷ ಕೊಲೆಯಾದಾಗ ಅಂತರ ಕಾಯ್ದುಕೊಂಡ ನೀವು ಈಗ ಹುಬ್ಬಳ್ಳಿ ಗಲಭೆಕೋರರಿಗೆ ಆರ್ಥಿಕ ಸಹಾಯ ನೀಡಲು ಹೊರಟಿದ್ದೀರಿ. ಏನಿದೆಲ್ಲ ಎಂದು ಪ್ರಶ್ನಿಸಿದೆ.

ಹುಬ್ಬಳ್ಳಿ ಗಲಭೆಯ ಆರೋಪಿಗಳಿಗೆ ಆರ್ಥಿಕ ಮತ್ತು ಆಹಾರ ಕಿಟ್ ಒದಗಿಸಲು ಹೊರಟ ಕಾಂಗ್ರೆಸ್‌ ಶಾಸಕರೊಬ್ಬರನ್ನು ಪ್ರಶ್ನಿಸುವಷ್ಟೂ ಸಾಮರ್ಥ್ಯ ಕೆಪಿಸಿಸಿ ಅಧ್ಯಕ್ಷರಿಗೆ ಇಲ್ಲವೇ? ಜಮೀರ್ ಅವರಿಗೆ ನೋಟಿಸ್ ನೀಡಿದರೆ ಸಿದ್ದರಾಮಯ್ಯ ಬಣದಿಂದ ಆಕ್ರೋಶ ವ್ಯಕ್ತವಾಗುವ ಭಯ ಡಿಕೆ ಶಿವಕುಮಾರ್  ಅವರನ್ನು ಕಾಡುತ್ತಿದೆಯೇ?

ಕೆಪಿಸಿಸಿ ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ಅವರಿಗೂ ನಮಗೂ ಸಂಬಂಧವಿಲ್ಲ ಎಂಬ ಸೋಗಲಾಡಿತನ ಬಿಡಿ. ಫುಡ್ ಕಿಟ್ ಹಂಚಲು ತಯಾರಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ನಿಮ್ಮ ಪಕ್ಷಕ್ಕೂ ಸಂಬಂಧ ಇದೆಯೋ, ಇಲ್ಲವೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ. ಈ ರೀತಿ ತಿಪ್ಪೆಸಾರಿಸುವ ಬದಲು ಸತ್ಯ ಒಪ್ಪಿಕೊಳ್ಳಿ ಎಂದು ಬಿಜೆಪಿ ಹೇಳಿದೆ.


Stay up to date on all the latest ರಾಜಕೀಯ news
Poll
Nitish_Kumar1

2024 ರ ಲೋಕಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಸಂಯುಕ್ತ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಬಹುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp