ಹೈಕಮಾಂಡ್ ಭೇಟಿಗೆ ಸಮಯ ಕೇಳಿಲ್ಲ, ಇಡೀ ದಿನ ಸಮ್ಮೇಳನದಲ್ಲಿ ಭಾಗಿ: ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತಲುಪಿದ್ದಾರೆ. ಇಂದು ಶನಿವಾರ ದೆಹಲಿಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನವಿದೆ, ಇಂದು ಇಡೀ ದಿನ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ.
Published: 30th April 2022 09:02 AM | Last Updated: 30th April 2022 01:02 PM | A+A A-

ಸಿಎಂ ಬಸವರಾಜ ಬೊಮ್ಮಾಯಿ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತಲುಪಿದ್ದಾರೆ. ಇಂದು ಶನಿವಾರ ದೆಹಲಿಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನವಿದೆ, ಇಂದು ಇಡೀ ದಿನ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ.
ದೆಹಲಿಗೆ ತೆರಳಿರುವ ಸಿಎಂ ಬಿಜೆಪಿ ಹೈಕಮಾಂಡ್ ಭೇಟಿಯಾಗಬಹುದು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆ ನಡೆಸಬಹುದು ಎಂಬ ವದಂತಿ ದಟ್ಟವಾಗಿದೆ. ಈ ನಡುವೆ ಸಚಿವಾಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಬಗ್ಗೆ ಮಾತುಗಳು ಜೋರಾಗಿವೆ.
ಆದರೆ ಇಂದು ಹೈಕಮಾಂಡ್ ಭೇಟಿ ಮಾಡುತ್ತಿಲ್ಲ, ಅವರ ಭೇಟಿಗೆ ಸಮಯವನ್ನು ಕೇಳಿಲ್ಲ, ಸಮಯ ನಿಗದಿಯಾಗಿಲ್ಲ. ಸಿಎಂ ಸಮ್ಮೇಳನ ಮುಗಿದ ನಂತರ ಸಂಜೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಔತಣಕೂಟ ಏರ್ಪಡಿಸಿದ್ದು ಅದರಲ್ಲಿ ಭಾಗವಹಿಸಲಿದ್ದೇನೆ, ನಾಡಿದ್ದು ಬೆಂಗಳೂರಿಗೆ ಹಿಂತಿರುಗುತ್ತೇನೆ ಎಂದು ಹೇಳಿದ್ದಾರೆ.
@CMofKarnataka @BSBommai #NewDelhi
— Devaraj Hirehalli Bhyraiah (@swaraj76) April 29, 2022
"Won't meet party bosses to discuss politics as entire day will be busy attending CMs and CJs conference, later dinner hosted by @PMOIndia @narendramodi. Didnot seek the appointment either".@XpressBengaluru @AshwiniMS_TNIE pic.twitter.com/iSViuAxmNQ
ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಐದು ಸ್ಥಾನಗಳು ಖಾಲಿ ಇವೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡಲೇ ಬೇಕಾಗಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ಕೂಡಾ ರಾಜೀನಾಮೆ ನೀಡಿದ್ದಾರೆ. ಈ ಸ್ಥಾನವನ್ನು ಭರ್ತಿ ಮಾಡಬೇಕಾಗಿದೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿ ದೆಹಲಿ ಭೇಟಿ: ಮತ್ತೆ ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಕುರ್ಚಿ ಕನಸು
ಸದ್ಯದ ಬೆಳವಣಿಗೆಗಳಲ್ಲಿ ಸಂಪುಟ ವಿಸ್ತರಣೆಗೆ ಬದಲಾಗಿ ಸಂಪುಟ ಪುನಾರಚನೆಗೆ ಹೈಕಮಾಂಡ್ ಹೆಚ್ಚಿನ ಒಲವು ತೋರಿಸುತ್ತಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಕೆಲವು ಸಚಿವರನ್ನು ಸಂಪುಟದಿಂದ ಕೈಬಿಟ್ಟು ಇತರರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲೂ ಚರ್ಚೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ದೆಹಲಿ ಪ್ರವಾಸವೂ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.