ಜನೋತ್ಸವ ಕಾರ್ಯಕ್ರಮ ಸ್ಥಗಿತಗೊಂಡಿದ್ದಕ್ಕೆ ಬಿಜೆಪಿಯಲ್ಲಿ ಗೊಂದಲ: ಕಾಂಗ್ರೆಸ್ ಪ್ರಮುಖರ ಸಭೆ ನಡೆಸಲು ರಾಹುಲ್ ನಿರ್ಧಾರ!

ಸಿದ್ದರಾಮೋತ್ಸವದ ಮುನ್ನಾ ದಿನ ಅಂದರೆ ಆಗಸ್ಟ್ 2 ರಂದು ನವದೆಹಲಿಯ ವಿಶೇಷ ನ್ಯಾಯಾಲಯವು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಇಡಿಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಲ್ಲಿಸಿರುವ ಆರೋಪಪಟ್ಟಿ  ಸಂಬಂಧ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಬೆಂಗಳೂರು: ಬಿಜೆಪಿ ಯುವ ಮುಖಂಜ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ‘ಜನೋತ್ಸವ’ ಕಾರ್ಯಕ್ರಮ ರದ್ದುಗೊಂಡಿದ್ದು, ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಬೃಹತ್ ಸಮಾರಂಭ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮೋತ್ಸವದ ಮುನ್ನಾ ದಿನ ಅಂದರೆ ಆಗಸ್ಟ್ 2 ರಂದು ನವದೆಹಲಿಯ ವಿಶೇಷ ನ್ಯಾಯಾಲಯವು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರುದ್ಧ ಇಡಿಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ  ಆರೋಪಪಟ್ಟಿ  ಸಂಬಂಧ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲಿದೆ.

ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಶಿವಕುಮಾರ್ ಹಾಗೂ ಪ್ರಕರಣದ ಇತರ ಆರೋಪಿಗಳಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ತೀರ್ಪು ಬಂದರೆ ಅದು ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹವನ್ನು ಕುಗ್ಗಿಸಬಹುದು ಎಂದು ನಾಯಕರೊಬ್ಬರು ಹೇಳಿದ್ದಾರೆ. ಆದರೆ ಛಲ ಬಿಡದ ಶಿವಕುಮಾರ್ ಭಾನುವಾರ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದರು.

ಮಂಗಳವಾರ ಸಂಜೆ ಆಗಮಿಸಲಿರುವ ರಾಹುಲ್, ಡಾ.ಜಿ.ಪರಮೇಶ್ವರ, ಬಿ.ಕೆ.ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಡಿ.ಕೆ.ಸುರೇಶ್, ಯು.ಟಿ.ಖಾದರ್ ಸೇರಿದಂತೆ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಹಿರಿಯ ನಾಯಕರ ಸಭೆ ನಡೆಸುವ ನಿರೀಕ್ಷೆಯಿದೆ. ರಮೇಶ್ ಕುಮಾರ್, ಕೆ.ಜೆ.ಜಾರ್ಜ್ ಸೇರಿದಂತೆ ಇನ್ನಿತರರು  ಭಾಗವಹಿಸಲಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಭಾಗವಹಿಸಲಿದ್ದು, ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆಯಲು ಸಭೆಯಿಂದ ಹೊರಗುಳಿಯಲಿದ್ದಾರೆ.

2023ರ ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್ ಕಾನುಗೋಳ್ ಅವರು ಮಾದರಿ ಸಮೀಕ್ಷೆಯ ವರದಿಯನ್ನು ಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದೆ.  ರಾಜ್ಯದ ಐದು ವಲಯಗಳ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com