2023 ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ. ಜಿ.ಪರಮೇಶ್ವರ್ ನೇಮಕ

ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪ್ರಣಾಳಿಕೆ ರೂಪಿಸಲು ‘ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ನೇಮಿಸಿದ್ದಾರೆ.
ಜಿ.ಪರಮೇಶ್ವರ್
ಜಿ.ಪರಮೇಶ್ವರ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪ್ರಣಾಳಿಕೆ ರೂಪಿಸಲು ‘ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ನೇಮಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಪ್ರತಿಪಕ್ಷ ಕಾಂಗ್ರೆಸ್ ‘ಚುನಾವಣಾ ಪ್ರಣಾಳಿಕೆ, ನೀತಿ (ಪಾಲಿಸಿ) ಮತ್ತು ದೃಷ್ಟಿಕೋನ (ವಿಷನ್) ಸಮಿತಿ'ಯನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶಹೊರಡಿಸಿದ್ದಾರೆ.

ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 2023ರ ಮೇ ತಿಂಗಳ ಒಳಗೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕಾಗಿ ಕಾಂಗ್ರೆಸ್ ಪಕ್ಷ ತಯಾರಲ್ಲಿ ತೊಡಗಿದೆ. ಅದರ ಭಾಗವಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಸಮಿತಿಯು ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಲು ಜನರ ಆಸೆ, ಆಕಾಂಕ್ಷೆಗಳ  ಬಗ್ಗೆ ತಿಳಿದುಕೊಳ್ಳುತ್ತದೆ ಮತ್ತು ಕರಡು ಸಿದ್ಧಪಡಿಸುವ ಮೊದಲು ಮತಾಂತರ ವಿರೋಧಿ ಮಸೂದೆ ಮತ್ತು ಜಿಎಸ್‌ಟಿಯಂತಹ ವಿಷಯಗಳ ಬಗ್ಗೆ ಚರ್ಚಿಸುತ್ತದೆ ಎಂದು ಪರಮೇಶ್ವರ ಹೇಳಿದರು.

ರಾಜ್ಯ ಸರ್ಕಾರವು ಕೊರೋನಾ ಸಾಂಕ್ರಾಮಿಕ ರೋಗವನ್ನು ನಿರ್ವಹಿಸವು ಎಡವಿದೆ.  ರಾಜ್ಯದ ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿರುವುದರಿಂದ ನಮ್ಮ ಪ್ರಣಾಳಿಕೆಯು ಆರ್ಥಿಕತೆಯನ್ನು ಮರಳಿ ಟ್ರ್ಯಾಕ್‌ಗೆ ತರಲು ಬೆಳವಣಿಗೆಯ ವಿಚಾರಗಳನ್ನು ಒಳಗೊಂಡಿರುತ್ತದೆ ಎಂದು ರಾಧಾಕೃಷ್ಣ ಹೇಳಿದರು. ಅಧಿಕಾರಕ್ಕೆ ಬಂದರೆ ಭವಿಷ್ಯದ ಸಾಂಕ್ರಾಮಿಕ ರೋಗಗಳು ಮತ್ತು ನೈಸರ್ಗಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಪಕ್ಷವು 'ಸ್ಥಿರತೆ ನಿಧಿ'ಯನ್ನು ಸ್ಥಾಪಿಸುವ ಬಗ್ಗೆ ಅವರು ಸುಳಿವು ನೀಡಿದರು.

ರಾಧಾಕೃಷ್ಣ ಅವರು 2013ರ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿದ್ದರು. ಚುನಾವಣೆಯಲ್ಲಿ ಪಕ್ಷ ಜಯಗಳಿಸಿ, ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೂರು ತಿಂಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಿ ಕರಡು ಪ್ರಣಾಳಿಕೆಯನ್ನು ಸಮಿತಿ ಹೊರತರಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com