ಪರಿಸ್ಥಿತಿ ಸುಧಾರಿಸಲು ಬಿಜೆಪಿ ತಿಣುಕಾಟ; ಸಿಎಂ ಗಾದಿಗಾಗಿ ಕಾಂಗ್ರೆಸ್ ಮುಖಂಡರ ಕಚ್ಚಾಟ; ಸಮಯದ 'ಲಾಭ' ಪಡೆಯಲು ಎಚ್ ಡಿಕೆ ಚದುರಂಗದಾಟ!

ರಾಜ್ಯದ ರಾಜಕೀಯ ಸೂಕ್ಷ್ಮ ಪರಿಸ್ಥಿತಿಯನ್ನು ತಹಬದಿಗೆ ತರಲು ಬಿಜೆಪಿ ರಾಜ್ಯ ಮತ್ತು ಕೇಂದ್ರ ನಾಯಕರು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಆಂತರಿಕ ಕಚ್ಚಾಟ ಮುಂದುವರಿದಿದೆ, ಈ ಸಮಯವನ್ನು ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್-ಜೆಡಿಎಸ್-ಬಿಜೆಪಿ
ಕಾಂಗ್ರೆಸ್-ಜೆಡಿಎಸ್-ಬಿಜೆಪಿ

ಬೆಂಗಳೂರು: ರಾಜ್ಯದ ರಾಜಕೀಯ ಸೂಕ್ಷ್ಮ ಪರಿಸ್ಥಿತಿಯನ್ನು ತಹಬದಿಗೆ ತರಲು ಬಿಜೆಪಿ ರಾಜ್ಯ ಮತ್ತು ಕೇಂದ್ರ ನಾಯಕರು ಪ್ರಯತ್ನಿಸುತ್ತಿದ್ದಾರ. ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಆಂತರಿಕ ಕಚ್ಚಾಟ ಮುಂದುವರಿದಿದೆ, ಈ ಸಮಯವನ್ನು ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

2023 ರ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಜೆಡಿಎಸ್ ಹವಣಿಸುತ್ತಿದೆ.

ದಕ್ಷಿಣ ಕನ್ನಡದಲ್ಲಿ ನಡೆದ ಮೂರು ಕೊಲೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಸೋಮವಾರ ಕರಾವಳಿ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವಧಿಪೂರ್ವ ಚುನಾವಣೆ ಭವಿಷ್ಯ ನುಡಿದಿರುವ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಕಲಬುರಗಿ ಮತ್ತು ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಕೇವಲ ತಮ್ಮದೇ ಪಕ್ಷದ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಿದರೂ, ಆದರೆ ಕುಮಾರಸ್ವಾಮಿ ಎಲ್ಲಾ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ದಕ್ಷಿಣ ಕನ್ನಡದಲ್ಲಿ ಶಾಂತಿ ಕದಡುವ ಕೆಲಸದಲ್ಲಿ ನಿರತವಾಗಿವೆ ಎಂದು ಆರೋಪಿಸಿದರು.

ಇಲ್ಲಿನ ಅಶಾಂತಿಗೆ ರಾಷ್ಟ್ರೀಯ ಪಕ್ಷಗಳನ್ನು ಹೊಣೆ ಮಾಡುವುದರಿಂದ ನಮ್ಮ ಪಕ್ಷಕ್ಕೆ ಲಾಭವಾಗಲಿದೆ. ಕುಮಾರಸ್ವಾಮಿ  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 224 ಸ್ಥಾನಗಳ ಪೈಕಿ 123 ಸ್ಥಾನಗಳ ಮೇಲೆ ಮಾತ್ರ ಗಮನ ಹರಿಸುತ್ತಿದ್ದರೂ, ಪಕ್ಷವು ಹೆಚ್ಚಿನ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. .ಇದು ಇತರ ಪಕ್ಷದ ಸ್ಪರ್ಧಿಗಳ, ವಿಶೇಷವಾಗಿ ಕಾಂಗ್ರೆಸ್‌ನ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಹಿರಿಯ ಜೆಡಿಎಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಭಾರತದಲ್ಲಿ ಇತ್ತೀಚೆಗೆ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ, ರಾಷ್ಟ್ರೀಯ ಪಕ್ಷಗಳು ಕಡಿಮೆ ಅಂತರದಲ್ಲಿಯಾದರೂ ಹಲವು ಸ್ಥಾನಗಳನ್ನು ಕಳೆದುಕೊಂಡಿವೆ. ಕರ್ನಾಟಕದಲ್ಲಿಯೂ ಇದೇ ಪರಿಸ್ಥಿತಿ ಎದುರಾಗಬಹುದು, ಅಲ್ಲಿ ಜೆಡಿಎಸ್ ಕಿಂಗ್‌ಮೇಕರ್ ಆಗಿ ಹೊರಹೊಮ್ಮಬಹುದು ಎಂದು ಹೇಳಿದ್ದಾರೆ.

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಪರ್ಯಾಯ ಎಂದು ಕುಮಾರಸ್ವಾಮಿ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ, ಹೊಸ ಸೇರ್ಪಡೆಗಳಾದ ಎಎಪಿ ಕೆಲವು ಪ್ರದೇಶಗಳಲ್ಲಿ ಕೆಲವು ಸ್ಥಾನಗಳನ್ನು ಮಾತ್ರ ಕೇಂದ್ರೀಕರಿಸಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com