ಜನರ ಸಂಪೂರ್ಣ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ನಾಯಕರು ರಾಜಕೀಯ ನಿವೃತ್ತಿ ಹೊಂದಲಿ: ಅಶ್ವಥ್ ನಾರಾಯಣ್
: ರಾಜ್ಯದ ಜನರ ವಿಶ್ವಾಸ ಕಳೆದು ಕೊಂಡಿರುವ ಕಾಂಗ್ರೆಸ್ ಪಕ್ಷವೂ ಶೀಘ್ರದಲ್ಲೇ ವಸ್ತು ಸಂಗ್ರಹಾಲಯವಾಗಿ ಬದಲಾಗಲಿದೆ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
Published: 04th August 2022 09:56 AM | Last Updated: 04th August 2022 09:56 AM | A+A A-

ಅಶ್ವತ್ಥ ನಾರಾಯಣ
ಬೆಳಗಾವಿ: ರಾಜ್ಯದ ಜನರ ವಿಶ್ವಾಸ ಕಳೆದು ಕೊಂಡಿರುವ ಕಾಂಗ್ರೆಸ್ ಪಕ್ಷವೂ ಶೀಘ್ರದಲ್ಲೇ ವಸ್ತು ಸಂಗ್ರಹಾಲಯವಾಗಿ ಬದಲಾಗಲಿದೆ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಪ್ರತಿಯೊಬ್ಬ ನಾಯಕನಿಗೂ ಅಧಿಕಾರದ ದುರಾಸೆಯಿದೆ. ಹೀಗಾಗಿ ಕಾಂಗ್ರೆಸ್ ಸದ್ಯ ಒಡೆದ ಮನೆಯಾಗಿದೆ ಎಂದು ಟೀಕಿಸಿದರು.
ಕಾಂಗ್ರೆಸ್‌ನ ರಾಜಕಾರಣ ಇಂದು ಅಪ್ರಸ್ತುತವಾಗಿದೆ. ಕಾಂಗ್ರೆಸ್ ನಾಯಕರು ರಾಜಕೀಯದಿಂದ ನಿವೃತ್ತಿ ಹೊಂದಬೇಕು ಮತ್ತು ಇತರರನ್ನು ಆಶೀರ್ವದಿಸುತ್ತಾ ಕುಳಿತುಕೊಳ್ಳಬೇಕು ಎಂದು ಸಚಿವರು ಹೇಳಿದರು. ತೋರಿಕೆಗೆ ಮಾತ್ರ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ ಎಂದು ಅಶ್ವತ್ಥ ನಾರಾಯಣ ಆರೋಪಿಸಿದ್ದಾರೆ.