ದುರಂತ ನಾಯಕ ಖರ್ಗೆ ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ? ಕಾಂಗ್ರೆಸ್ ಮೌನವನ್ನು ಪ್ರಶ್ನಿಸಿದ ಬಿಜೆಪಿ!
80 ದಾಟಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ ಎಂದು #CONgressAgainstDalits ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡಿದೆ ರಾಜ್ಯ ಬಿಜೆಪಿ.
Published: 05th August 2022 04:34 PM | Last Updated: 05th August 2022 04:34 PM | A+A A-

ಮಲ್ಲಿಕಾರ್ಜುನ್ ಖರ್ಗೆ
ಬೆಂಗಳೂರು: 80 ದಾಟಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಗಾಗಿ ಯಾರು ದುಃಖಿಸುವವರೇ ಇಲ್ಲ ಎಂದು #CONgressAgainstDalits ಎಂಬ ಹ್ಯಾಷ್ ಟ್ಯಾಗ್ ಅಡಿ ಸರಣಿ ಕೂ ಮಾಡಿದೆ ರಾಜ್ಯ ಬಿಜೆಪಿ.
ಸಿದ್ದರಾಮಯ್ಯ, ಡಿಕೆಶಿ ಆದಿಯಾಗಿ ಕಾಂಗ್ರೆಸ್ ನಾಯಕರೆಲ್ಲರೂ 75 ರ ಈ ಇಳಿ ಹರೆಯದಲ್ಲೂ ಸೋನಿಯಾ #ED ವಿಚಾರಣೆಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮರುಕಪಟ್ಟರು. ದುರಂತ ನಾಯಕ ಖರ್ಗೆ 80 ವರ್ಷ ದಾಟಿದ್ದಾರೆ, ದುಃಖಿಸುವವರೇ ಇಲ್ಲ! ದಲಿತ ಎಂಬ ಕಾರಣಕ್ಕಾಗಿ ಇಷ್ಟೊಂದು ನಿಕೃಷ್ಟವೇ?
ಸೋನಿಯಾ ಗಾಂಧಿ ಅವರನ್ನು #ED ವಿಚಾರಣೆ ನಡೆಸುವ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆ ತಮ್ಮ 80 ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ನಕಲಿ ಗಾಂಧಿ ಕುಟುಂಬಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಿರುವ ದಲಿತ ನಾಯಕ ಖರ್ಗೆ ಅವರನ್ನು ತನಿಖೆ ನಡೆಸುತ್ತಿರುವಾಗ ಕಾಂಗ್ರೆಸ್ ಪಕ್ಷ ಮೌನವಾಗಿದೆ. ಏಕೆ ಈ ತಾರತಮ್ಯ?
ನಕಲಿ ಗಾಂಧಿಗಳು ತನಿಖಾ ಸಂಸ್ಥೆಯ ಎದುರು ವಿಚಾರಣೆಗೆ ಹಾಜರಾದಾಗ ಕಾಂಗ್ರೆಸ್ ಪಕ್ಷ ಆಕಾಶ ಭೂಮಿ ಒಂದಾಗುವಂತೆ ಪ್ರತಿಭಟಿಸಿತು. ಆದರೆ ಈಗ ದಲಿತ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಜಾರಿ ನಿರ್ದೇಶನಾಲಯದ ಎದುರು ಕುಳಿತಾಗ ಕಾಂಗ್ರೆಸ್ ದಿವ್ಯ ಮೌನ ಅನುಸರಿಸುತ್ತಿದೆ. ಏಕೆ ಈ ದ್ವಂದ್ವ ನೀತಿ? ಎಂದು ಸರಣಿ ಟ್ವೀಟ್ ಮಾಡಿದೆ.