ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣ; '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತ!
ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳನ್ನಾಡುತ್ತಿದ್ದು, ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತು ವ್ಯಂಗ್ಯವಾಡಿದೆ.
Published: 09th August 2022 03:23 PM | Last Updated: 09th August 2022 04:50 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಮಾತುಗಳನ್ನಾಡುತ್ತಿದ್ದು, ವಿಧಾನಸಭೆ ಚುನಾವಣೆಗೆ 8 ತಿಂಗಳಷ್ಟೇ ಬಾಕಿ ಇರುವಾಗ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ಕುರಿತು ವ್ಯಂಗ್ಯವಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಟೀಕಿಸಿದೆ.
ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಆಗಸ್ಟ್ 15ರೊಳಗೆ ಮಹತ್ವದ ಬದಲಾವಣೆ? ತುಮಕೂರಿನ ಮಾಜಿ ಶಾಸಕ ಏನಂತಾರೆ?
ಮುಂದುವರಿದು, ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನು ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಎಂದು ಬಿಜೆಪಿ ಉತ್ತರಿಸಲಿ ಎಂದು ಕಾಂಗ್ರೆಸ್ ಕೇಳಿದೆ.
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ @BSBommai ಅವರನ್ನ ಕೇಶವ ಕೃಪಾದವರು 'ಸಂಘಪರಿವಾರಿ'ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ!
— Karnataka Congress (@INCKarnataka) August 9, 2022
ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್!
ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ @BJP4Karnataka?
ನಾನೂ ಕೂಡ ಸಿಎಂ ಆಕಾಂಕ್ಷಿ ಎಂದಿರುವ ಉಮೇಶ್ ಕತ್ತಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ 'ಕತ್ತಿ ವರಸೆ' ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬಸವರಾಜ ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿvsಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಪ್ರಶ್ನಿಸಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ.
— Karnataka Congress (@INCKarnataka) August 9, 2022
ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು @BJP4Karnataka ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ.
ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ.#PuppetCM
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ದೂರಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ!
— Karnataka Congress (@INCKarnataka) August 9, 2022
40% ಸರ್ಕಾರದಲ್ಲಿ '3ನೇ ಸಿಎಂ' ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ!#PuppetCM @BSBommai ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.
ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ.