ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ?: ಬಿಜೆಪಿ ತಿರುಗೇಟು
ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಟೀಕೆಗಳಿಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಕುಟುಕಿದೆ.
Published: 14th August 2022 06:56 PM | Last Updated: 14th August 2022 06:56 PM | A+A A-

ಬಿಜೆಪಿ ಜಾಹಿರಾತು
ಬೆಂಗಳೂರು: ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಟೀಕೆಗಳಿಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಗೆ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಕುಟುಕಿದೆ.
ಕಾಂಗ್ರೆಸ್ ಪಕ್ಷಕ್ಕೆ ತನ್ನ ಯಜಮಾನ ನೆಹರೂ ಅವರನ್ನು ಗುರುತಿಸಲಾಗದಷ್ಟು ಮಂಪರು ಕವಿದಿದೆಯೇ?
— BJP Karnataka (@BJP4Karnataka) August 14, 2022
ಕಾಂಗ್ರೆಸ್ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? pic.twitter.com/7GHbxkPFcS
ಸರ್ಕಾರಿ ಜಾಹಿರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಚಿತ್ರ ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ಕಾಂಗ್ರೆಸ್ ಕೂಡಲೇ ಸಿಎಂ ಬೊಮ್ಮಾಯಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ಅತ್ತ ಸಿದ್ದರಾಮಯ್ಯ ಅವರೂ ಕೂಡ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.
75ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ಸ್ವತಂತ್ರ ಹೋರಾಟದ ಮುಂಚೂಣಿ ನಾಯಕರಾಗಿದ್ದ ನೆಹರುರವರನ್ನು ಕೈಬಿಟ್ಟು ಬಿಜೆಪಿ ಸರ್ಕಾರ ತನ್ನ ರಾಜಕೀಯ ದ್ವೇಷದ ಪರಮಾವಧಿಯನ್ನು ಪ್ರದರ್ಶಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ @DKShivakumar ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕ್ಷಮೆಗೆ ಆಗ್ರಹಿಸಿದ್ದಾರೆ. pic.twitter.com/21X3RdfuN6
— Karnataka Congress (@INCKarnataka) August 14, 2022
ಅಂತೆಯೇ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿರುವ ಜಾಹೀರಾತಿನಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡಗೆವಾರ್ ಅವರ ಚಿತ್ರವನ್ನೂ ಏಕೆ ಕೈಬಿಟ್ಟಿದ್ದೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ ಜೈಲುಶಿಕ್ಷೆ ಅನುಭವಿಸಿದ್ದ ಹೆಡಗೆವಾರ್ ಚಿತ್ರ ಕೈಬಿಡಲು ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ? ಎಂದು ಸಿಎಂ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದ ಪ್ರಕರಣ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ
ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಬಿಜೆಪಿ, ತನ್ನದೇ ಜಾಹಿರಾತು ಮರು ಹಂಚಿಕೆ ಮಾಡಿಕೊಂಡಿದ್ದು, ಅದರೊಟ್ಟಿಗೆ, 'ಕಾಂಗ್ರೆಸ್ ಪಕ್ಷಕ್ಕೆ ತನ್ನ ಯಜಮಾನ ನೆಹರೂ ಅವರನ್ನು ಗುರುತಿಸಲಾಗದಷ್ಟು ಮಂಪರು ಕವಿದಿದೆಯೇ? ಕಾಂಗ್ರೆಸ್ ಇಷ್ಟು ಬೇಗ ನೆಹರು ಮುಖ ಮರೆಯಿತೇ ಅಥವಾ ಇದು ಜಾಣ ಕುರುಡೋ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ನೆಹರೂ ಫೋಟೋ ಮಾಯ!: ಕಾಂಗ್ರೆಸ್ ತೀವ್ರ ಆಕ್ಷೇಪ, ಆಕ್ರೋಶ ಹೊರಹಾಕಿದ ನಾಯಕರು
ಸರ್ಕಾರಿ ಜಾಹಿರಾತಿನಲ್ಲಿ ನೆಹರೂ ಅವರ ಚಿತ್ರವಿದ್ದು, ಅದನ್ನು ಗುರುತಿಸಲಾಗದಷ್ಟರ ಮಟ್ಟಿಗೆ ಕಾಂಗ್ರೆಸ್ ಅವರನ್ನು ಮರೆತು ಹೋಗಿದೆ ಎಂದು ಟೀಕಿಸಿದೆ.