ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರು!

ಸ್ವತಂತ್ರ ಭಾರತದ 75ನೇ ವರ್ಷದ ಪ್ರಯುಕ್ತ ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರುವಾಗಿದೆ. ಇದರ ನೇರ ಪ್ರಸಾರವನ್ನು ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ಕಾಂಗ್ರೆಸ್ ನಡಿಗೆ
ಕಾಂಗ್ರೆಸ್ ನಡಿಗೆ

ಬೆಂಗಳೂರು: ಸ್ವತಂತ್ರ ಭಾರತದ 75ನೇ ವರ್ಷದ ಪ್ರಯುಕ್ತ ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರುವಾಗಿದೆ. ಇದರ ನೇರ ಪ್ರಸಾರವನ್ನು ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಬೃಹತ್ ನಡಿಗೆ ಶುರುವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅದರ ನೇತೃತ್ವ ವಹಿಸಿಕೊಂಡಿದ್ದು, ರಾಷ್ಟ್ರ ಧ್ವಜ ಹಿಡಿದು ಸಾಗುತ್ತಿದ್ದಾರೆ. ಇದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾಗಿದ್ದು, ಕೆ.ಆರ್. ವೃತ್ತ, ಟೌನ್ ಹಾಲ್ , ಮಿನರ್ವ ವೃತ್ತದ ಸಾಗಿ ನ್ಯಾಷನಲ್ ಕಾಲೇಜಿನಲ್ಲಿ ಸಮಾಪ್ತಿಗೊಳ್ಳಲಿದೆ.

ಜನ ಸಾಗರವೇ ಹರಿದು ಬರುತ್ತಿದೆ. ಸಂಗೊಳ್ಳಿ ರಾಯಣ್ಣ ವೃತ್ತದ ಕಡೆಗೆ ಡೊಳ್ಳು ಕುಣಿತ, ವೀರ ಗಾಸೆ ಸೇರಿದಂತೆ ವಿವಿಧ ಜಾನಪದ ನೃತ್ಯಗಳ ಸಂಭ್ರಮ ಶುರುವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com