ಸೇವೆ ಸಲ್ಲಿಸುವ ಗೌರವಕ್ಕೆ ಆಭಾರಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಧನ್ಯವಾದ ಸಲ್ಲಿಸಿದ ಬಿಎಸ್ ವೈ

ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಗೆ ಧನ್ಯವಾದ ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಗೆ ಧನ್ಯವಾದ ಹೇಳಿದ್ದಾರೆ.

ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ನನ್ನನ್ನು ಸದಸ್ಯನನ್ನಾಗಿ ನೇಮಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ರವರಿಗೆ ಕೃತಜ್ಞತೆಗಳು. ನಮ್ಮ ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಈ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದರೊಂದಿಗೆ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ. ದಕ್ಷಿಣ ಭಾರತದ ತುಂಬ ಪ್ರವಾಸ ಮಾಡಿ ಪಕ್ಷ ಸಂಘಟಿಸಲು ಪ್ರಧಾನಿ ಸೂಚಿಸಿದರು ಎಂದು ಮಾಜಿ ಸಿಎಂ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ದೂರವಾಣಿ ಕರೆ ಮಾಡಿ ಬಿಎಸ್ ವೈ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com