'ಮುಸ್ಲಿಮರ ಏರಿಯಾ' ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ: ಕೆರಳಿ ಕೆಂಡವಾದ ಬಿಜೆಪಿ ನಾಯಕರು

ವೀರ ಸಾವರ್ಕರ್ ಪೋಸ್ಟರ್ ವಿವಾದ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಪೋಸ್ಟರ್ ನ್ನು ಹಾಕುವ ಕೆಲಸ ಏಕೆ ಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಪ್ರಶ್ನಿಸಿದ್ದರು.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು/ಶಿವಮೊಗ್ಗ: ವೀರ ಸಾವರ್ಕರ್ ಪೋಸ್ಟರ್ ವಿವಾದ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಪೋಸ್ಟರ್ ನ್ನು ಹಾಕುವ ಕೆಲಸ ಏಕೆ ಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಪ್ರಶ್ನಿಸಿದ್ದರು.

ಇದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಮುಸ್ಲಿಂ ಏರಿಯಾ ಎಂಬ ಪದವನ್ನಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರಾದ ಕೆ ಎಸ್ ಈಶ್ವರಪ್ಪ, ಸಿ ಟಿ ರವಿ, ಡಾ ಸುಧಾಕರ್ ಸೇರಿದಂತೆ ಇನ್ನೂ ಹಲವರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ.

ಶಿವಮೊಗ್ಗ ಇರುವುದು ಭಾರತದಲ್ಲಿಯೇ ಇಲ್ಲ ಪಾಕಿಸ್ತಾನ, ಬಾಂಗ್ಲಾದೇಶದಲ್ಲಿಯೇ ಎಂದು ಕೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಯಾವಾಗಲೂ ರಾಷ್ಟ್ರದ್ರೋಹಿಗಳಾದ ಮುಸ್ಲಿಮರ ಪರವಾಗಿಯೇ ಮಾತನಾಡುತ್ತಾರೆ. ಸಿದ್ದರಾಮಯ್ಯ ಹೇಳಿಕೆ ರಾಷ್ಟ್ರದೋಹಿ ಹೇಳಿಕೆ, ಈ ದೇಶದಲ್ಲಿ ಮುಸಲ್ಮಾನರು ಇರುವ ಪ್ರದೇಶ ಎಂದು ಎಲ್ಲೂ ಇಲ್ಲ, ಸಿದ್ದರಾಮಯ್ಯನವರು ಸೃಷ್ಟಿ ಮಾಡುತ್ತಿದ್ದಾರೆ.

ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಡೀ ದೇಶದಲ್ಲಿ ಸಾವರ್ಕರ್ ಸೇರಿದಂತೆ ರಾಷ್ಟ್ರಪ್ರೇಮಿ ನಾಯಕರ ಫೋಟೋ ಹಾಕಲು ಅವಕಾಶವಿದೆ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮುಸ್ಲಿಮರ ಏರಿಯಾ ಅಂದರೆ ಅರ್ಥವೇನು ಎಂದು ಕೇಳಿದ್ದಾರೆ.

ಮುಸ್ಲಿಂ ಪ್ರದೇಶ" ಎಂಬುದರ ಅರ್ಥವೇನು? ಪದೇ ಪದೇ ಜಿಹಾದಿ ಮನಸ್ಥಿತಿಯನ್ನು ಪ್ರದರ್ಶಿಸುವ ಮೂಲಕ ನೀವು ಅಮಾಯಕರನ್ನು ಕೊಲ್ಲುವ ಜಿಹಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದು ಸಾಬೀತುಪಡಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರೀಯವಾದಿ ವೀರ್ ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ನಿಮಗೆ ಸವಾಲು ಹಾಕುತ್ತೇನೆ. ಸ್ವೀಕರಿಸಲು ಧೈರ್ಯವಿದೆಯೇ ಎಂದು ಇದೇ ಸಂದರ್ಭದಲ್ಲಿ ಸವಾಲು ಹಾಕಿದ್ದಾರೆ.

ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು ಎಂಬ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಸಿದ್ದರಾಮಯ್ಯ ನೀಡಿರುವ ಈ ಹೇಳಿಕೆ ಇದೀಗ ಟ್ವಿಟ್ಟರ್‌ನಲ್ಲೂ ಸಾಕಷ್ಟು ಟ್ರೆಂಡ್ ಸೃಷ್ಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com