ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಬೇಕಿತ್ತಾ, ಮಗೂನ ಚಿವುಟಿ ತೊಟ್ಟಿಲು ತೂಗುವ ಮನಸ್ಥಿತಿ ಬಿಜೆಪಿಯದ್ದು: ಸಿದ್ದರಾಮಯ್ಯ
ಶಿವಮೊಗ್ಗದಲ್ಲಿ ವೀರ ಸಾವರ್ಕರ್-ಟಿಪ್ಪು ಸುಲ್ತಾನ್ ಪೋಸ್ಟರ್ ಗೆ ಸಂಬಂಧಪಟ್ಟಂತೆ ಉಂಟಾಗಿರುವ ಘರ್ಷಣೆ ಈಗ ರಾಜಕೀಯ ನಾಯಕರ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರಸ್ಪರ ಆರೋಪ-ಪ್ರತ್ಯೋರೋಪ ಮಾಡುತ್ತಿದ್ದಾರೆ.
Published: 17th August 2022 10:08 AM | Last Updated: 17th August 2022 02:44 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಶಿವಮೊಗ್ಗದಲ್ಲಿ ವೀರ ಸಾವರ್ಕರ್-ಟಿಪ್ಪು ಸುಲ್ತಾನ್ ಪೋಸ್ಟರ್ ಗೆ ಸಂಬಂಧಪಟ್ಟಂತೆ ಉಂಟಾಗಿರುವ ಘರ್ಷಣೆ ಈಗ ರಾಜಕೀಯ ನಾಯಕರ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪರಸ್ಪರ ಆರೋಪ-ಪ್ರತ್ಯೋರೋಪ ಮಾಡುತ್ತಿದ್ದಾರೆ.
ಇಂತಹ ಘಟನೆಗೆ ಕಾಂಗ್ರೆಸ್ ನೇರ ಕಾರಣ ಎಂದು ಕೆ ಎಸ್ ಈಶ್ವರಪ್ಪ ಆರೋಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ. ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಅನ್ನೋದು. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದ್ರೆ ಟಿಪ್ಪು ಫೋಟೋ ಏಕೆ ತೆಗೆಯುತ್ತಾರೆ. ಹೀಗೆ ಮಾಡಿದ್ರೆ ಗಲಭೆ ಆಗುವುದಿಲ್ಲವೇ?
ಇದನ್ನೂ ಓದಿ: ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಸಾರ್ವಕರ್ ಫೋಟೋ: ವ್ಯಾಪಕ ಟೀಕೆ, ವಿವಾದ
ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ತೂಗ್ತಾರೆ. ಘಟನೆಯಲ್ಲಿ ಎಸ್‍ಡಿಪಿಐ ಇದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೇ ಇದೆ. ಎಸ್‍ಡಿಪಿಐ, ಪಿಎಫ್‍ಐ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಅಂತ ನಿಮ್ಮ ಬಳಿ ದಾಖಲೆ ಇದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.
ಇದೀಗ ಸಿದ್ದರಾಮಯ್ಯ ಹೇಳಿರುವ ಮುಸ್ಲಿಂ ಏರಿಯಾ ಪದ ರಾಜಕೀಯವಾಗಿ ಟೀಕೆಗೆ ಗ್ರಾಸವಾಗಿದೆ.