'ಯಡಿಯೂರಪ್ಪನವರು ಬಿಜೆಪಿ ಪಕ್ಷಕ್ಕೆ ದೊಡ್ಡ ಶಕ್ತಿ, ಅವರ ರಾಜಕೀಯ ಅನುಭವ ಪಕ್ಷಕ್ಕೆ ಲಾಭ ತರಲಿದೆ': ಅರುಣ್ ಸಿಂಗ್
ಬಿಜೆಪಿ ಸಂಸದೀಯ ಸಮಿತಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸದಸ್ಯ ಸ್ಥಾನ ಸಿಕ್ಕಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಭಾಶಯ ತಿಳಿಸಿದ್ದಾರೆ.
Published: 18th August 2022 12:07 PM | Last Updated: 18th August 2022 01:32 PM | A+A A-

ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಬೆಂಗಳೂರು: ಬಿಜೆಪಿ ಸಂಸದೀಯ ಸಮಿತಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸದಸ್ಯ ಸ್ಥಾನ ಸಿಕ್ಕಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶುಭಾಶಯ ತಿಳಿಸಿದ್ದಾರೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ದೊಡ್ಡ ಶಕ್ತಿ ಇದ್ದಂತೆ. ಅವರ ರಾಜಕೀಯ ಅನುಭವ ಪಕ್ಷಕ್ಕೆ ಲಾಭ ತರಲಿದೆ. ಪಕ್ಷದ ಉನ್ನತ ಮಟ್ಟದ ಸಮಿತಿಗಳಿಗೆ ಬಿಎಸ್ವೈ ಸದಸ್ಯರಾಗಿದ್ದಾರೆ. ಬಿಎಸ್ವೈ ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ಮೂರು ಬಾರಿ ವಿಪಕ್ಷ ನಾಯಕರೂ ಆಗಿದ್ದರು. ಕರ್ನಾಟಕ ಮಾತ್ರವಲ್ಲ ಇಡೀ ದಕ್ಷಿಣ ಭಾರತಕ್ಕೆ ಲಾಭ ಆಗಲಿದೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲೇ ನಾವು ಸಾಗುತ್ತೇವೆ. ಬಿಎಸ್ವೈಗೆ ಜವಾಬ್ದಾರಿ ಕೊಟ್ಟ ಪ್ರಧಾನಿ ಮೋದಿ ಅವರಿಗೂ ಧನ್ಯವಾದಗಳು ಎಂದಿದ್ದಾರೆ.
BJP state incharge & Rajya Sabha member Shri @ArunSinghbjp Ji
today met Former Chief Minister Shri @BSYBJP Ji at his Kaveri residence & greeted him for being newly inducted to the @BJP4India's Central Parliamentary Board & Central Election Committee pic.twitter.com/9B21wLD59P— Vijayendra Yeddyurappa (@BYVijayendra) August 18, 2022
ಬಿಎಸ್ ವೈ ಅವರಿಗೆ ಕೇಂದ್ರ ಸಮಿತಿಯಲ್ಲಿ ಸ್ಥಾನಮಾನ ನೀಡುತ್ತಿದ್ದಂತೆ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಸಭೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: 'ನಿವೃತ್ತಿ ಹೊಂದಲು ನಾನು ಬಯಸಿರಲಿಲ್ಲ, ಹೊಸ ಹುದ್ದೆ ಅಚ್ಚರಿ ತಂದಿದೆ, ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ': ಬಿ ಎಸ್ ಯಡಿಯೂರಪ್ಪ
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಈ ತಿಂಗಳಾಂತ್ಯಕ್ಕೆ ಬಿಜೆಪಿಯಲ್ಲಿ ಪ್ರಮುಖ ಬದಲಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ.