ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸೂಕ್ತ ಭದ್ರತೆ: ಸಿಎಂ ಬೊಮ್ಮಾಯಿ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. 

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ಧೇನೆ. ಅವರಿಗೆ ಜೀವ ಬೆದರಿಗೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ನಿಟ್ಟಿನಲ್ಲಿ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ, ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ. ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದರು.

ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಆದರೆ, ಇದು ಎರಡೂ ಕಡೆಯಲ್ಲೂ ನಡೆಯುತ್ತಿದೆ. ಯಾರೂ ಮತ್ತೊಬ್ಬರನ್ನು ಕೆರಳಿಸುವ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಾದ ಸೂಚನೆಯನ್ನು ಎಸ್‌ಪಿಗಳಿಗೂ ನೀಡಲಾಗಿದೆ ಎಂದರು.

ನಿನ್ನೆ ಸಿದ್ದರಾಮಯ್ಯನವರು ಕೊಡಗು ಜಿಲ್ಲಾ ಪ್ರವಾಸದ ವೇಳೆ ಆರಂಭದಲ್ಲಿ ತಿತಿಮತಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ಕುಶಾಲನಗರ ತಾಲ್ಲೂಕಿನ ಗೊಡ್ಡಹೊಸೂರಿನಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com