'ತಮ್ಮ ಸಿದ್ಧಾಂತ ಯಾವುದು ಸ್ಪಷ್ಟಪಡಿಸಿ; ಜಾತಿ, ಧರ್ಮವನ್ನೊಡೆದು ಆಳುವುದೇ? ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ?'
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
Published: 19th August 2022 02:16 PM | Last Updated: 19th August 2022 03:15 PM | A+A A-

ಅಶ್ವತ್ಥ ನಾರಾಯಣ
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅಶ್ವತ್ಥ ನಾರಾಯಣ ‘ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ ಸಿದ್ದರಾಮಯ್ಯ ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೊ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದ್ದಾರೆ. ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಸಿದ್ಧಾಂತ ಯಾವುದು? ಸ್ಪಷ್ಟಪಡಿಸಿ #ಸುಳ್ಳುಗಳಸರದಾರ @siddaramaiah ಅವರೇ,
ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?
"ಮುಸ್ಲಿಂ ಏರಿಯಾ"ದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ?
ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ,
ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ? pic.twitter.com/1uQup26Vqu— Dr. Ashwathnarayan C. N. (@drashwathcn) August 19, 2022
ಸಿದ್ದರಾಮಯ್ಯ ಅವರೇ, ನಿಮ್ಮ ಸಿದ್ಧಾಂತ ಯಾವುದು? ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?, ಮುಸ್ಲಿಂ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ? ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ, ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ’ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.
ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ @siddaramaiah ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೋ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದರು.
— Dr. Ashwathnarayan C. N. (@drashwathcn) August 19, 2022
ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು. ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.