ಶ್... ಗಪ್ ಚುಪ್... ಎಲ್ಲೆಂದರಲ್ಲಿ ಸರ್ಕಾರದ ವಿರುದ್ಧ ಮಾತನಾಡಿದರೆ ಸ್ಟ್ರಿಕ್ಟ್ ಆ್ಯಕ್ಷನ್: ಬಿಜೆಪಿ 'ಹೈ' ವಾರ್ನಿಂಗ್!

2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಷ್ಠೆಯನ್ನು ಹಾಳು ಮಾಡಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆರೋಪಿಸಿದ್ದಾರೆ.
ಬಿಜೆಪಿ ಪದಾಧಿಕಾರಿಗಳ ಸಭೆ
ಬಿಜೆಪಿ ಪದಾಧಿಕಾರಿಗಳ ಸಭೆ

ಬೆಂಗಳೂರು: ಕೆಲವು ಬಿಜೆಪಿ ನಾಯಕರು ತಮ್ಮ ಹೇಳಿಕೆಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಮುಜುಗರದ ಪರಿಸ್ಥಿತಿಗೆ ಸಿಲುಕಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪಕ್ಷದ ಹೈಕಮಾಂಡ್ ಸಾರ್ವಜನಿಕವಾಗಿ ಅಥವಾ ದೂರವಾಣಿಯಲ್ಲಿ ಯಾವುದೇ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಿದೆ.

2023ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಪ್ರತಿಷ್ಠೆಯನ್ನು ಹಾಳು ಮಾಡಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂದು ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆರೋಪಿಸಿದ್ದಾರೆ. ಈ ಹಿಂದೆ ನಡೆದ ಪದಾಧಿಕಾರಿಗಳ ಸಭೆಯಲ್ಲಿಯೂ ಇದೇ ನಿರ್ಣಯ ಕೈಗೊಂಡಿತ್ತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧು ಸ್ವಾಮಿ ಅವರು ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ. ಮ್ಯಾನೇಜ್ ಮಾಡಲಾಗುತ್ತಿದೆ ಎಂಬ ಹೇಳಿಕೆ ವೈರಲ್ ಆದ ನಂತರ, ಕಾಂಗ್ರೆಸ್ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಮಾಧು ಸ್ವಾಮಿ ಅವರ ಸಂಪುಟದ ಸಹೋದ್ಯೋಗಿಗಳಾದ ಎಸ್ ಟಿ ಸೋಮಶೇಖರ ಮತ್ತು ಮುನಿರತ್ನ ಅವರ ವಿರುದ್ಧವೂ ಮಾಧುಸ್ವಾಮಿ ಮಾತನಾಡಿದ್ದರು. ಮಾಧು ಸ್ವಾಮಿ ಆ ರೀತಿ ಮಾತನಾಡಬಾರದಿತ್ತು ಎಂದು ಕಂದಾಯ ಸಚಿವ ಆರ್.ಅಶೋಕ ಕೂಡ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದರೆ ರಾಜೀನಾಮೆ ನೀಡುವುದಾಗಿ ಮಾಧು ಸ್ವಾಮಿ  ಹೇಳಿದ್ದರು.

ಇದಕ್ಕೂ ಮುನ್ನ ಬಿಜೆಪಿ ಮಾಜಿ ಶಾಸಕ ಬಿ ಸುರೇಶ್ ಗೌಡ ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡಿರುವುದು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿಯನ್ನು ಬರಲಿದ್ದಾರೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿಯನ್ನು ಟ್ರೋಲ್ ಮಾಡಿತ್ತು. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಸಚಿವ ಬಿ ಶ್ರೀರಾಮುಲು ಹೇಳಿರುವುದು ಬಿಜೆಪಿಗೆ ಮುಜುಗರ ತಂದಿದೆ.

ಸಭೆಯಲ್ಲಿ ಈ ವಿಷಯಗಳನ್ನು ಪ್ರಸ್ತಾಪಿಸಿದ ಅರುಣ್ ಸಿಂಗ್, ಬಹಿರಂಗ ಹೇಳಿಕೆ ನೀಡದಂತೆ ನಾಯಕರಿಗೆ ಎಚ್ಚರಿಕೆ ನೀಡಿದರು.  ಕರ್ನಾಟಕದ ಜನರನ್ನು ದಾರಿತಪ್ಪಿಸಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು. ಜನಾದೇಶವಿಲ್ಲದ ಕಾಂಗ್ರೆಸ್ ಜನರನ್ನು ದಾರಿತಪ್ಪಿಸಲು ಇಂತಹ ಗೊಂದಲ ಸೃಷ್ಟಿಸುತ್ತಿದೆ ಎಂದು ನನಗೆ ಮಾಹಿತಿ ಇದೆ. ಕಾಂಗ್ರೆಸ್ ಒಂದು ಪಿತೂರಿ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮನೆಯೊಳಗೆ ಅಥವಾ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಪಕ್ಷ ಮತ್ತು ಸರ್ಕಾರದ ಬಗ್ಗೆ ಮಾತನಾಡದಂತೆ  ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಸಿದ್ದಾರೆ.

ನಾಯಕತ್ವ ಬದಲಾವಣೆಯ ಊಹಾಪೋಹಗಳ ಬಗ್ಗೆ ಮಾತನಾಡಿದ ಅವರು, ಬೊಮ್ಮಾಯಿ ಅವರು ಕಾಮನ್ ಸಿಎಂ ಆಗಿರುವುದರಿಂದ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ರೈತರ ಮಕ್ಕಳಿಗೆ 'ರೈತ ವಿದ್ಯಾನಿಧಿ' ವಿದ್ಯಾರ್ಥಿವೇತನ, ಬಡವರು ಮತ್ತು ಮುಖ್ಯವಾಗಿ ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ತಲುಪಿಸುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com