ತುಕ್ಡೆ ಗ್ಯಾಂಗ್ ರಾಜ್ಯವನ್ನು ಹರಿದು ಹಂಚಲು ಹೊರಟಿದೆ; ಕರ್ನಾಟಕವೇನು ಬಿಜೆಪಿಯವರ ಅಪ್ಪನ ಮನೆಯ ಆಸ್ತಿಯೇ?: ಕಾಂಗ್ರೆಸ್

ರಾಜ್ಯ ಬಿಜೆಪಿ ಎಂಬ ತುಕ್ಡೆ ಗ್ಯಾಂಗ್ ಕರ್ನಾಟಕವನ್ನು ಹರಿದು ಹಂಚಲು ಹೊರಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಬಿಜೆಪಿ ಎಂಬ ತುಕ್ಡೆ ಗ್ಯಾಂಗ್ ಕರ್ನಾಟಕವನ್ನು ಹರಿದು ಹಂಚಲು ಹೊರಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. ಒಬ್ಬರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಎನ್ನುತ್ತಾರೆ. ಇನ್ನೊಬ್ಬರು ಬೆಳಗಾವಿ ವಿಚಾರದಲ್ಲಿ ದ್ರೋಹ ಬಗೆಯುತ್ತಾರೆ. ಮತ್ತೊಬ್ಬರು ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎನ್ನುತ್ತಾರೆ. ಕರ್ನಾಟಕವೇನು ಬಿಜೆಪಿಯವರ ಅಪ್ಪನ ಮನೆಯ ಆಸ್ತಿಯೇ ಎಂದು ಪ್ರಶ್ನಿಸಿದೆ.

ಅತಿವೃಷ್ಟಿಯಿಂದ 75ಕ್ಕೂ ಹೆಚ್ಚು ಜನ ಸತ್ತಿದ್ದಾರೆ, ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿಯಾಗಿದೆ, ನೂರಾರು ಮನೆ ಉರುಳಿವೆ. ಸರ್ಕಾರ ಮಾತ್ರ ಯಾವುದಕ್ಕೂ ಪರಿಹಾರ ಕ್ರಮ ಕೈಗೊಂಡಿಲ್ಲ. ವಿಪಕ್ಷ ನಾಯಕರು ಈ ಬಗ್ಗೆ ಬೆಳಕು ಚೆಲ್ಲಿದರೆ ವೈಫಲ್ಯ ಬಯಲಾಗುತ್ತದೆ ಎಂದು ರಾಜ್ಯ ಬಿಜೆಪಿ ದೈಹಿಕ ಹಲ್ಲೆಗೆ ಮುಂದಾಗಿದೆ ಎಂದು ಕಾಂಗ್ರೆಸ್  ಆರೋಪಿಸಿದೆ. 

ಜನರ ಕಷ್ಟವನ್ನು ತಾವೂ ಕೇಳುವುದಿಲ್ಲ, ಬೆರೆಯವರೂ ಕೇಳಬಾರದು ಎಂಬ ಧೋರಣೆ ಸರ್ಕಾರದ್ದು. ಅತಿವೃಷ್ಟಿಗೆ ಕೈಗೊಂಡ ಕ್ರಮಗಳೇನು, ನೀಡಿದ ಪರಿಹಾರವೇನು? ಉತ್ತರಿಸುವ ಧೈರ್ಯ ಸರ್ಕಾರಕ್ಕಿದೆಯೇ? ಇದುವರೆಗೂ ನಷ್ಟದ ಸರ್ವೆ ನಡೆಸದೆ, ಪರಿಹಾರ ಘೋಷಿಸದೆ ಕುರ್ಚಿ ಕಸರತ್ತಿನಲ್ಲಿ ಮುಳುಗಿದ ಸರ್ಕಾರ ಈಗ ವಿಪಕ್ಷಗಳನ್ನು ತಡೆಯುತ್ತಿದೆ ಎಂದು ಕಾಂಗ್ರೆಸ್ ದೂರಿದೆ.

ಅತಿವೃಷ್ಟಿ ಹಾನಿ ವೀಕ್ಷಣೆಗೆ ತೆರಳಿದ್ದ ವಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನಸಾಮಾನ್ಯರ ರಕ್ಷಣೆ ಈ ಸರ್ಕಾರದಿಂದ ಸಾಧ್ಯವೇ? ಗೃಹಸಚಿವರು ಇನ್ನೂ ಹುದ್ದೆಯಲ್ಲಿರಲು ಅರ್ಹರೇ? ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದೆ. ಸಿದ್ದರಾಮಯ್ಯ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಎಂದು ಪ್ರಶ್ನಿಸಿದ್ದು, ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com