ಬಿಜೆಪಿಯಿಂದ ಸೆಪ್ಟೆಂಬರ್ 8ರಂದು 'ಜನೋತ್ಸವ': ಡಾ ಕೆ ಸುಧಾಕರ್; ಬಿಜೆಪಿ-ಕಾಂಗ್ರೆಸ್ ನಾಯಕರ ಮಧ್ಯೆ ವಾಗ್ದಾಳಿ

ಇತ್ತೀಚೆಗಷ್ಟೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರದ ಮೊದಲ ವರ್ಷವನ್ನು ಆಚರಿಸಲು ಯೋಜಿಸಿದ್ದ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದ ಬಿಜೆಪಿ ಇದೀಗ ಅದನ್ನು ನಡೆಸಲು ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇತ್ತೀಚೆಗಷ್ಟೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರದ ಮೊದಲ ವರ್ಷವನ್ನು ಆಚರಿಸಲು ಯೋಜಿಸಿದ್ದ ‘ಜನೋತ್ಸವ’ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದ ಬಿಜೆಪಿ ಇದೀಗ ಅದನ್ನು ನಡೆಸಲು ನಿರ್ಧರಿಸಿದೆ.

ಮುಂದಿನ ತಿಂಗಳು ಸೆಪ್ಟೆಂಬರ್ 8ರಂದು ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರು ಇದರಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಾವು ಈ ಹಿಂದೆ ನಡೆಸಲು ಉದ್ದೇಶಿಸಿದ್ದ ಜನೋತ್ಸವವನ್ನು ನಡೆಸುವ ಸಮಯ ಈಗ ಬಂದಿದೆ. ದೊಡ್ಡಬಳ್ಳಾಪುರದಲ್ಲಿ ಮೊದಲ ಜನೋತ್ಸವ ನಡೆಯಲಿದೆ. ನಂತರ ಇನ್ನೂ 4-5 ಕಾರ್ಯಕ್ರಮಗಳನ್ನು ಬೇರೆ ಬೇರೆ ಕಡೆಗಳಲ್ಲಿ ಆಯೋಜಿಸಲಾಗುವುದು ಎಂದರು. 

ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗ’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸುಧಾಕರ್, “ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್‌ಗೆ ರಾಷ್ಟ್ರಧ್ವಜ ನೆನಪಾಗಿರಲಿಲ್ಲವೇ ಪ್ರಧಾನಿ ಹರ್ ಘರ್ ತಿರಂಗಾ ಅಭಿಯಾನವನ್ನು ಘೋಷಿಸಿದ ನಂತರ ಮಾತ್ರ ಅವರು ಮಾತನಾಡುತ್ತಿದ್ದಾರೆ ಎಂದರು. 

ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ‘ಜನೋತ್ಸವ’ ಹಮ್ಮಿಕೊಳ್ಳಲಾಗಿದೆ. ನಾವು ಸರ್ಕಾರದ ರಿಪೋರ್ಟ್ ಕಾರ್ಡ್ ಅನ್ನು ಜನರ ಮುಂದೆ ಇಡುತ್ತಿದ್ದೇವೆ ಎಂದು ಕಾರ್ಯಕ್ರಮದ ಆಯೋಜನೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸುಧಾಕರ್ ಹೇಳಿದ್ದಾರೆ. 

ಬಿಜೆಪಿ ಆಡಳಿತದಲ್ಲಿ ಸಂವಿಧಾನಕ್ಕೆ ಧಕ್ಕೆ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟೀಕೆಗೆ ಉತ್ತರಿಸಿದ ಸುಧಾಕರ್, 'ಕಳೆದ 8 ವರ್ಷಗಳಿಂದ ನರೇಂದ್ರ ಮೋದಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು 5 ವರ್ಷ ಪ್ರಧಾನಿಯಾಗಿದ್ದರು. 13 ವರ್ಷಗಳ ಬಿಜೆಪಿ ಆಡಳಿತದಲ್ಲಿ ಸಂವಿಧಾನ ಎಂದಾದರೂ ಅಪಾಯದಲ್ಲಿದೆಯೇ ಎಂದು ಕೇಳಿದರು. 

ಇನ್ನು ಬಿಜೆಪಿ ‘ಜನೋತ್ಸವ’ವನ್ನು ‘ಭ್ರಷ್ಟಾಚಾರದ ಹಬ್ಬ’ ಎಂದು ಕರೆದಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಇದಕ್ಕೆ 2023ರಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com