ಪಕ್ಷ ತೊರೆಯುವ ಮೊದಲೇ ಜಿಟಿ ದೇವೇಗೌಡರಿಗೆ ಶಾಕ್: ಜೆಡಿಎಸ್ ಅಧಿಕೃತ ವೆಬ್ ಸೈಟ್ ನಿಂದ ಜಿಟಿಡಿ ಪೋಟೋ ಔಟ್!

ಜೆಡಿಎಸ್​ ವೆಬ್​ಸೈಟ್​ನಿಂದ ಜಿ.ಟಿ.ದೇವೇಗೌಡರ ಹೆಸರನ್ನು ಹೊರಗಿಡಲಾಗಿದೆ. ಹಳೆ ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದರೂ ಜಿಟಿಡಿ ಅವರ ಫೋಟೋ ಮತ್ತು ಹೆಸರನ್ನ ಪಕ್ಷದ ಎಲ್ಲಾ ಪೋಸ್ಟರ್ ನಿಂದಲೂ ತೆಗೆಯಲಾಗುತ್ತಿದೆ.
ಜಿ.ಟಿ. ದೇವೇಗೌಡ
ಜಿ.ಟಿ. ದೇವೇಗೌಡ

ಮೈಸೂರು: ಎಲ್ಲಾ ಭಿನ್ನಾಭಿಪ್ರಾಯಗಳು ಬಗೆಹರಿದಿರುವ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಜಿಟಿ ದೇವೇಗೌಡರು ಪಕ್ಷದಲ್ಲೇ ಉಳಿಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಖಚಿತ ಪಡಿಸಿದ ಬೆನ್ನಲ್ಲೇ ಜೆಡಿಎಸ್ ಮೈಸೂರು ಜಿಲ್ಲಾ ಘಟಕದಲ್ಲಿ ಹೊಸ ಬೆಳವಣಿಗೆಯೊಂದು ಬೆಂಬಲಿಗರಲ್ಲಿ ಬೇಸರ ಮೂಡಿಸಿದೆ. .

ಜೆಡಿಎಸ್​ ವೆಬ್​ಸೈಟ್​ನಿಂದ ಜಿ.ಟಿ.ದೇವೇಗೌಡರ ಹೆಸರನ್ನು ಹೊರಗಿಡಲಾಗಿದೆ. ಹಳೆ ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದರೂ ಜಿಟಿಡಿ ಅವರ ಫೋಟೋ ಮತ್ತು ಹೆಸರನ್ನ ಪಕ್ಷದ ಎಲ್ಲಾ ಪೋಸ್ಟರ್ ನಿಂದಲೂ ತೆಗೆಯಲಾಗುತ್ತಿದೆ.

ಜೆಡಿಎಸ್ ಅಧಿಕೃತ ವೆಬ್‌ಸೈಟ್‌ನಲ್ಲಿ ದೇವೇಗೌಡರ ಹೆಸರೇ ಇಲ್ಲ, ಈ ವೆಬ್ ಸೈಟ್ ನಲ್ಲಿ ಜೆಡಿಎಸ್ ನ ಎಲ್ಲಾ ಶಾಸಕರು ಮತ್ತು ಸಂಸದರ ಫೋಟೋಗಳು ಮತ್ತು ಹೆಸರುಗಳಿವೆ. https://jds.ind.in/ ಹೆಸರಿನಲ್ಲಿ ಪಕ್ಷ ಸಂಘಟನೆಯ ಅಧಿಕೃತ ವೆಬ್​ಸೈಟ್ ರಚನೆ ಮಾಡಲಾಗಿದೆ. ಈ ವೆಬ್​ಸೈಟ್​​ನಲ್ಲಿ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರ ಹೆಸರು ಹಾಗೂ ಕಚೇರಿ ವಿಳಾಸದ ಜತೆಗೆ ದೂರವಾಣಿ ಸಂಖ್ಯೆಯನ್ನು ಒಳಗೊಂಡ ಮಾಹಿತಿ ನೀಡಲಾಗಿದೆ.

ಸದರಿ ವೆಬ್​ಸೈಟ್ ನಲ್ಲಿ ಜೆಡಿಎಸ್ ಹಿರಿಯ ಶಾಸಕರಾಗಿರುವ ಜಿ.ಟಿ.ದೇವೇಗೌಡರ ಕುರಿತ ಸಣ್ಣ ಮಾಹಿತಿಯೂ ಇಲ್ಲ. ಮೈಸೂರಿನ ಶಾಸಕ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ಕೆ.ಮಹದೇವು ಅವರ ಸಂಪೂರ್ಣ ಮಾಹಿತಿ ಈ ವೆಬ್​ಸೈಟ್​​ನಲ್ಲಿದೆ. ಈಗಾಗಲೇ ಮೈಸೂರು ಭಾಗದ ಜೆಡಿಎಸ್ ಮುಖಂಡರ ಜಾಹೀರಾತು ಫಲಕದಲ್ಲಿ ಜಿಟಿಡಿ ಅವರ ಫೋಟೋ ತೆಗೆಯಲಾಗಿದೆ.

2018 ರ ಹೈವೋಲ್ಟೇಜ್ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಹಾಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದರು. ದೇವೇಗೌಡರ ಬೆಂಬಲಿಗರು ಅದರಲ್ಲೂ ಮೈಸೂರಿನ ಗ್ರಾಮಾಂತರ ಭಾಗದ ಜನರು ತಮ್ಮ ನಾಯಕನ ಮುಂದಿನ ನಡೆ  ಏನು ಎಂದು ತಿಳಿಯುವ ಕುತೂಹಲದಲ್ಲಿದ್ದಾರೆ. ಕ್ಷೇತ್ರದಲ್ಲಿ ಅವರಿಗಿರುವ ಪ್ರಭಾವವನ್ನು ಪರಿಗಣಿಸಿ ಜೆಡಿಎಸ್ ಮುಖಂಡ ಹಾಗೂ ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಇತ್ತೀಚೆಗೆ ದೇವೇಗೌಡರನ್ನು ಭೇಟಿ ಮಾಡಿ ಪಕ್ಷದಲ್ಲಿಯೇ ಉಳಿಯುವಂತೆ ಮನವಿ ಮಾಡಿದ್ದರು.

ಜೆಡಿಎಸ್ ನಾಯಕರು ಉದ್ದೇಶಪೂರ್ವಕವಾಗಿ ಮಾಡಿದ್ದಾರೆ. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಮೇಲಿನ ಗೌರವದಿಂದ ಪಕ್ಷದಲ್ಲಿ ಮುಂದುವರಿಯಲು ಯೋಚಿಸಿದ್ದರೂ ವೆಬ್‌ಸೈಟ್‌ನಲ್ಲಿ ಅವರ ಫೋಟೋ ಮತ್ತು ಹೆಸರನ್ನು ಹಾಕದಿರುವುದು ನಮ್ಮ ನಾಯಕನಿಗೆ ಮಾಡಿದ ಅಗೌರವ. ಇದನ್ನು ದೇವೇಗೌಡರ ಗಮನಕ್ಕೆ ತಂದಿದ್ದು, ಮುಂದೆ ಚರ್ಚಿಸುತ್ತೇವೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರೊಬ್ಬರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com