ಮುನಿರತ್ನ
ಮುನಿರತ್ನ

ಹಣ ವಸೂಲಿ ಮಾಡಿಕೊಡದಿದ್ದರೆ ಸಸ್ಪೆಂಡ್; ‘ಮನಿ’ರತ್ನರಿಂದ ಅಧಿಕಾರಿಗಳಿಗೆ ಬೆದರಿಕೆ: ಕಾಂಗ್ರೆಸ್ ಆರೋಪ

ಸಚಿವ ವಿ. ಮುನಿರತ್ನ ಅವರ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪ ಮಾಡಿರುವುದನ್ನು ರಾಜ್ಯ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಸಚಿವ ವಿ. ಮುನಿರತ್ನ ಅವರ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಮಿಷನ್ ಆರೋಪ ಮಾಡಿರುವುದನ್ನು ರಾಜ್ಯ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ಭ್ರಷ್ಟೋತ್ಸವ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಸಚಿವ ಮುನಿರತ್ನ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಹಣ ವಸೂಲಿ ಮಾಡಿ ಕೊಡದಿದ್ದರೆ ಸಸ್ಪೆಂಡ್ ಮಾಡುತ್ತೇನೆಂದು ‘ಮನಿ’ರತ್ನ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಸಂಗತಿ ಗುತ್ತಿಗೆದಾರರಿಂದ ಬಹಿರಂಗವಾಗಿದೆ.

ರೌಡಿಸಂ ಮೂಲಕ ಭ್ರಷ್ಟಾಚಾರ ನಡೆಸುತ್ತಿರುವ ಸಚಿವ ಮುನಿರತ್ನರ ರಾಜೀನಾಮೆ ಯಾವಾಗ ಪಡೆಯುವಿರಿ? ತನಿಖೆ ನಡೆಸಿ ತಮ್ಮ ಪಾರದರ್ಶಕತೆ ಯಾವಾಗ ತೋರಿಸುವಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವತಃ ಗುತ್ತಿಗೆದಾರರಾಗಿದ್ದ ಸಚಿವ ‘ಮನಿ’ರತ್ನ ಸಚಿವ ಸ್ಥಾನ ಸಿಕ್ಕಿದ್ದೇ ತಡ ಗುತ್ತಿಗೆದಾರರನ್ನೇ ದೋಚಲು ಶುರು ಮಾಡಿದ್ದಾರೆ, 40% ಕಮಿಷನ್ ಸರ್ಕಾರ ಅಧಿಕಾರಿಗಳನ್ನೇ ವಸೂಲಿಗೆ ಬಳಸಿಕೊಳ್ಳುತ್ತಿದೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ರಾಜ್ಯದಲ್ಲಿ IAS, IPS ಅಧಿಕಾರಿಗಳ ಬಂಧನವಾಗಿದ್ದು ಇದಕ್ಕೆ ಪುಷ್ಠಿ ಕೊಡುತ್ತದೆ ಎಂದು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com