
ನಕ್ಷೆ ಬಿಡುಗಡೆ
ಬೆಂಗಳೂರು: ಕಾಂಗ್ರೆಸ್ ಪಕ್ಷ ಶುಕ್ರವಾರ ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ, ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಯೋಜನೆ ಹಾಕಿಕೊಂಡಿದೆ.
ಈ ಯಾತ್ರೆಯನ್ನು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕಾಂಗ್ರೆಸ್ ಕರೆ ನೀಡಿದೆ.
ಇದನ್ನು ಓದಿ: ಪಕ್ಷವನ್ನು 'ಸಂಪೂರ್ಣವಾಗಿ ನಾಶಪಡಿಸಲಾಗಿದೆ', ಇದಕ್ಕೆ ನಾಯಕತ್ವವೇ ನೇರ ಹೊಣೆ: ಕಾಂಗ್ರೆಸ್ ತ್ಯಜಿಸಿದ ಆಜಾದ್
ದೇಶದಲ್ಲಿ 20 ರಿಂದ 24 ವರ್ಷದ ಶೇ. 42 ರಷ್ಟು ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ ಎಂದು ಕಾಂಗ್ರೆಸ್ ಹೇಳಿದೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಹೆಜ್ಜೆಗಳನ್ನು ಜೋಡಿಸಿ, ದೇಶವನ್ನು ಒಂದಾಗಿಸಿ ಎಂದು ಆಹ್ವಾನ ನೀಡಿದ್ದಾರೆ.