ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಕಮಿಷನ್ ಪಡೆದಿದ್ದರೆ ಬಿಜೆಪಿ ತನಿಖೆ ನಡೆಸಲಿ: ಜಿ.ಪರಮೇಶ್ವರ್

ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮಿಷನ್‌ ದಂಧೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್‌ ಸಚಿವರ್ಯಾರೂ ಕಮೀಷನ್‌ ದಂಧೆಯಲ್ಲಿ ಭಾಗಿಯಾಗಿರಲಿಲ್ಲ .
ಜಿ.ಪರಮೇಶ್ವರ್
ಜಿ.ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮಿಷನ್‌ ದಂಧೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್‌ ಸಚಿವರ್ಯಾರೂ ಕಮೀಷನ್‌ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್‌ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುವುದಾದರೆ ಆ ಬಗ್ಗೆ ಸರ್ಕಾರ ತನಿಖೆ ಮಾಡಲಿ. ಆಗ ಬಿಜೆಪಿಯವರು ತಗೊಂಡಿದ್ದಾರೊ ಅಥವಾ ನಾವು ಪಡೆದಿದ್ದೇವೋ ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ನಿಂದ ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸುವ ಸರ್ಕಾರವು ಆ ಬಗ್ಗೆ ತನಿಖೆ ನಡೆಸಲಿ.‌ ಆಗ ಯಾರು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರವಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ ಹೇಳಿದರು.

ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಸಂಘ (ರುಪ್ಸಾ) ಸಹ ಪ್ರಧಾನಿಗೆ ಪತ್ರ ಬರೆದಿದೆ. ಆ ಮೂಲಕ ಈ ಸರಕಾರವು ಇಲಾಖಾವಾರು ನಡೆಸುತ್ತಿರುವ ಭ್ರಷ್ಟಾಚಾರವು ಜಗಜ್ಜಾಹೀರಾಗುತ್ತಿದೆ. ಮುಂದೆ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಇಂತಹ ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಲಾಗುವುದು ಎಂದರು.

ಸಚಿವ ಮುನಿರತ್ನ ಅವರಿಂದ ಕಮಿಷನ್‍ಗೆ ಬೇಡಿಕೆ: ಡಿ.‌ ಕೆಂಪಣ್ಣ ಗಂಭೀರ ಆರೋಪ

137 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ನಲ್ಲಿ ಹಲವು ನಾಯಕರು ಪಕ್ಷ ತೊರೆದಿದ್ದಾರೆ ಮತ್ತು ಒಡಕು ಮಾಡಿದ್ದಾರೆ. ಅದಕ್ಕೆ ಈಗ ಗುಲಾಂ ನಬಿ ಆಜಾದ್ ಸಹ ಸೇರಿದ್ದಾರೆ. ಇಂತಹ ಬೆಳವಣಿಗೆಗಳು ಪಕ್ಷದಲ್ಲಿ ನಡೆಯುತ್ತಲೇ ಇರುತ್ತವೆ.  ಇಲ್ಲಿಂದ ಬೇರೆ ಪಕ್ಷಕ್ಕೆ ಹೋದವರು ಅಲ್ಲಿ ದೊಡ್ಡ ನಾಯಕರಾಗಿದ್ದಾರೆ. ಇವೆಲ್ಲದರ ನಡುವೆಯೂ ಪಕ್ಷ ಉಳಿದಿದೆ. ಹೊಸ ನಾಯಕತ್ವ ಹುಟ್ಟಿಕೊಳ್ಳುತ್ತಲೇ ಇರುತ್ತದೆ. ದೇಶದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರಿದ್ದು, ಅವರೇ ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com