ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ವಿ.ಸೋಮಣ್ಣ ಮನೆಗೆ ಭೇಟಿ: ಕಾಂಗ್ರೆಸ್ ಟೀಕೆ
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಬೆಂಗಳೂರು ನಗರದ ರೌಡಿ ಶೀಟರ್ ಗಳ ರಾಜಕೀಯ ಪ್ರವೇಶ ಕುರಿತ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Published: 01st December 2022 01:21 PM | Last Updated: 01st December 2022 01:37 PM | A+A A-

ಸಚಿವ ವಿ.ಸೋಮಣ್ಣ
ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಬೆಂಗಳೂರು ನಗರದ ರೌಡಿ ಶೀಟರ್ ಗಳ ರಾಜಕೀಯ ಪ್ರವೇಶ ಕುರಿತ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ರೌಡಿ ಶೀಟರ್ ಗಳಾದ ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ಇದೀಗ ವಿಲ್ಸನ್ ಗೌರ್ಡನ್ ನಾಗ ವಸತಿ ಮತ್ತು ಮೂಲಸೌಕರ್ಯಗಳ ಸಚಿವ ವಿ. ಸೋಮಣ್ಣ ಅವರ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಶ್ನಿಸಲಾಗಿದ್ದು, ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ ಎಂದು ಕೇಳಿದೆ.
ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು
— Karnataka Congress (@INCKarnataka) December 1, 2022
ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ!
ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?
ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ? ಎಂದು ಪ್ರಶ್ನಿಸಿದೆ.
ಇದನ್ನೂ ಓದಿ: ದೋ ನಂಬರ್ ದಂಧೆ ಮಾಡುವವರೇ ಅದರ್ಶಪುರುಷರು: ಕ್ರಿಮಿನಲ್ಗಳನ್ನು ಸುಭಗರಂತೆ ಸಮರ್ಥಿಸುತ್ತಿರುವ ಬಿಜೆಪಿ!
ಮತ್ತೊಂದೆಡೆ ಈ ವಿಚಾರ ಕುರಿತಂತೆ ಪ್ರತಿಕ್ರಿಯಿಸಿರುವ ವಿ. ಸೋಮಣ್ಣ, ತಾನು ರೌಡಿ ಶೀಟರ್ ನಾಗನನ್ನು ಭೇಟಿ ಮಾಡಿಲ್ಲ ಎಂದು ತಿಳಿಸಿದ್ದಾರೆ.