ಕಿಂಗ್ ಮೇಕರ್ ಆಗುವ ಪ್ರಯತ್ನದಲ್ಲಿ ಜೆಡಿಎಸ್; ಜನವರಿಯಿಂದ ಎಚ್.ಡಿ. ದೇವೇಗೌಡ ಚುನಾವಣಾ ಪ್ರಚಾರ ಆರಂಭ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು 2023ರ ಜನವರಿಯಿಂದ ಚುನಾವಣಾ ಪ್ರಚಾರ ಆರಂಭಿಸುವುದಾಗಿ ಗುರುವಾರ ಘೋಷಿಸಿದ್ದಾರೆ.
ಎಚ್.ಡಿ.ದೇವೇಗೌಡ
ಎಚ್.ಡಿ.ದೇವೇಗೌಡ

ಮೈಸೂರು: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು 2023ರ ಜನವರಿಯಿಂದ ಚುನಾವಣಾ ಪ್ರಚಾರ ಆರಂಭಿಸುವುದಾಗಿ ಗುರುವಾರ ಘೋಷಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅನ್ನು ಅಧಿಕಾರಕ್ಕೆ ತರುವುದಾಗಿ ಪಣ ತೊಟ್ಟಿರುವ ಅವರು, ಸಾಮಾನ್ಯರನ್ನು ತಲುಪಲು ಮನೆ-ಮನೆ ಪ್ರಚಾರವನ್ನು ತೀವ್ರಗೊಳಿಸುವಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಕರೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಇತರ ನಾಯಕರು ಈಗಾಗಲೇ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆಯನ್ನು ಪ್ರಾರಂಭಿಸಿದ್ದು, ಪಕ್ಷದ ಪ್ರತಿ ನಾಯಕರಿಗೆ ಪ್ರತಿ ಹಳ್ಳಿಯ ಜವಾಬ್ದಾರಿಯನ್ನು ನೀಡಲಾಗಿದೆ' ಎಂದು ಅವರು ಹೇಳಿದರು.

ಪಕ್ಷದ ನಾಯಕರು, ಶಾಸಕರು ಮತ್ತು ಮಾಜಿ ಶಾಸಕರಿಗೂ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದ ದೇವೇಗೌಡರು, ಪಕ್ಷವು ಪ್ರಕಟಿಸಿದ ಮೊದಲ ಪಟ್ಟಿ ಇನ್ನೂ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿದಿನ ಪಟ್ಟಿಯನ್ನು ಪರಿಶೀಲಿಸಲಾಗುವುದು. ಪ್ರತಿದಿನ ಸಮೀಕ್ಷೆಗಳನ್ನು ನಡೆಸಲಾಗುತ್ತದೆ. ಭಿನ್ನಾಭಿಪ್ರಾಯ ಹೊಂದಿರುವ ನಾಯಕರು ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಮೂರನೇ ಶಕ್ತಿಯಾಗಿಯೇ ಗುರುತಿಸಿಕೊಂಡಿರುವ ಜೆಡಿಎಸ್ ನಿರ್ಣಾಯಕ ಪಾತ್ರವನ್ನು ವಹಿಸಲು ಹವಣಿಸುತ್ತಿದೆ.

ಹೀಗಾಗಿ, 224 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 30 ರಿಂದ 40 ಸ್ಥಾನಗಳನ್ನು ಗೆದ್ದು ಕಿಂಗ್ ಮೇಕರ್ ಆಗುವ ಪ್ರಯತ್ನದಲ್ಲಿದೆ. ಆದಾಗ್ಯೂ, ರಾಷ್ಟ್ರೀಯ ಪಕ್ಷಗಳು ಕೂಡ ತೀವ್ರ ಚುನಾವಣಾ ಕದನದಲ್ಲಿ ತೊಡಗಿವೆ.

2019 ರಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‌ನಿಂದ ಪ್ರಬಲ ನಾಯಕರು ಸೇರ್ಪಡೆಗೊಳ್ಳುವುದರೊಂದಿಗೆ ದಕ್ಷಿಣ ಕರ್ನಾಟಕದಲ್ಲಿ ಬಲವನ್ನು ಪಡೆದ ನಂತರ ರಾಜ್ಯದ ಆಡಳಿತಾರೂಢ ಬಿಜೆಪಿ ಇದೀಗ ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆಯುವ ವಿಶ್ವಾಸದಲ್ಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೇರಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ.

ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಒಕ್ಕಲಿಗ ಸಮುದಾಯದವರೇ ಆದ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಸಮುದಾಯದ ಮತದಾರರಲ್ಲಿ ಈ ಬಾರಿ ತಮಗೇ ಅವಕಾಶ ನೀಡವಂತೆ ಮನವಿ ಮಾಡಿದ್ದಾರೆ. ಇನ್ನು ಆಡಳಿತಾರೂಢ ಬಿಜೆಪಿ ಕೂಡ ಒಕ್ಕಲಿಗ ಮತಬ್ಯಾಂಕ್‌ಗೆ ಕಾಲಿಡುವ ಆತಂಕ ಜೆಡಿಎಸ್‌ನಲ್ಲೂ ಇದೆ. ಇಲ್ಲಿಯವರೆಗೂ ಒಕ್ಕಲಿಗರೂ ಜೆಡಿಎಸ್‌ನ ಮತಬ್ಯಾಂಕ್ ಶಕ್ತಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com