ತುಮಕೂರು: ಸಿದ್ದಗಂಗಾ ಮಠಕ್ಕೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ

2023ರ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ತುಮಕೂರಿನ ಪಂಚರತ್ನ ಯಾತ್ರೆಗೆ ಚಾಲನೆ ನೀಡಿದರು.
ಸಿದ್ದಗಂಗಾ ಮಠದಲ್ಲಿ ಹೆಚ್.ಡಿ.ಕುಮಾರಸ್ವಾಮಿ.
ಸಿದ್ದಗಂಗಾ ಮಠದಲ್ಲಿ ಹೆಚ್.ಡಿ.ಕುಮಾರಸ್ವಾಮಿ.

ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ತುಮಕೂರಿನ ಪಂಚರತ್ನ ಯಾತ್ರೆಗೆ ಚಾಲನೆ ನೀಡಿದರು.

ಇದೇ ವೇಳೆ ತುಮಕೂರಿನ ಪ್ರಮುಖ ಲಿಂಗಾಯತ ಮಠವಾದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದಿಗೆ ಸಮ್ಮುಖದಲ್ಲಿ ಪೂಜೆ ಸಲ್ಲಿಸಿದರು.

ಪಂಚರತ್ನ ಯಾತ್ರೆ ವೇಳೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕೆಲವು ಭಾಗಗಳಲ್ಲಿ ಯಾತ್ರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತಿವಾಗಿದ್ದು ಕಂಡು ಬಂದಿತು.

ಯಾತ್ರೆ ವೇಳೆ ಮಾತನಾಡಿದ ಕುಮಾರಸ್ವಾಮಿಯವರು ಗೋವಿಂದರಾಜು ಅವರನ್ನು ತುಮಕೂರು ನಗರದಿಂದ ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದರು.

ಜೆಡಿಎಸ್‌ನ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ತುಮಕೂರು ಜಿಲ್ಲೆ 11 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಅದರಲ್ಲಿ ಮೂರು ಕ್ಷೇತ್ರಗಳನ್ನು ಜೆಡಿಎಸ್ ಪ್ರತಿನಿಧಿಸುತ್ತಿದೆ.

ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರಿನಿಂದ ಕಡಿಮೆ ಅಂತರದಿಂದ ಸೋಲು ಕಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com