ಸಿ.ಟಿ ರವಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.
Published: 03rd December 2022 02:06 PM | Last Updated: 03rd December 2022 02:06 PM | A+A A-

ಸಂಗ್ರಹ ಚಿತ್ರ
ಚಿಕ್ಕಮಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ.ರವಿ ಅವರ ಮನೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಘಟನೆ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಪ್ರತಿಭಟನಾಕಾರರನ್ನ ರಸ್ತೆ ಮಧ್ಯೆಯೇ ತಡೆದ ಪೊಲೀಸರು, ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.