ಸಿದ್ದರಾಮಯ್ಯ ಚಾಮರಾಜಪೇಟೆಯ ಅಳಿಯ, ಚುನಾವಣೆಯಲ್ಲಿ ಅವರ ಗೆಲುವು ಖಚಿತ: ಜಮೀರ್ ಅಹ್ಮದ್ ಖಾನ್

ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ನನ್ನ ಬೇಡಿಕೆಗೆ ಬದ್ಧವಾಗಿದ್ದೇನೆ ಎಂದು ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಸೋಮವಾರ ಹೇಳಿದ್ದಾರೆ.
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ನನ್ನ ಬೇಡಿಕೆಗೆ ಬದ್ಧವಾಗಿದ್ದೇನೆ ಎಂದು ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರ ಕುರಿತು ಪಕ್ಷದ ಹೈ ಕಮಾಂಡ್ ನಿರ್ಧರಿಸುತ್ತದೆ. ಆದರೆ, ಈ ಹಿಂದೆ ನಾನು ನೀಡಿದ್ದ ಹೇಳಿಕೆಗೆ ಈಗಲೂ ನಾನು ಬದ್ಧನಾಗಿದ್ದೇನೆಂದು ಹೇಳಿದ್ದಾರೆ.

2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಅವರಿಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ನೀಡಲು ಸಿದ್ಧನಿದ್ದೇನೆ. ನಾನು ಈ ಕ್ಷೇತ್ರದ ಮಗ, ಸಿದ್ದರಾಮಯ್ಯ ಈ ಕ್ಷೇತ್ರದ ಅಳಿಯ, ಇಲ್ಲಿಂದ ಸ್ಪರ್ಧಿಸಿದರೆ ಅವರಿಗೆ ಗೆಲುವು ಖಚಿತ ಎಂದು ತಿಳಿಸಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಿ.ಎಂ.ಇಬ್ರಾಹಿಂ ಕೂಡ ಸಿಎಂ ಆಗಬಹುದು ಎಂಬ ಮಾಜಿ ಸಿಎಂ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರಶ್ನೆಗೆ ಉತ್ತರಿಸಿ, ಮೈತ್ರಿ ಸರ್ಕಾರವಿದ್ದರೂ ಅಲ್ಪಸಂಖ್ಯಾತ ನಾಯಕರೇ ಸಿಎಂ ಆಗುತ್ತಾರೆ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ. ಕೇವಲ 25-30 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅವರಿಗೆ (ಎಚ್‌ಡಿಕೆ) ತಿಳಿದಿದೆ, ಈ ಹಿಂದೆ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿಲ್ಲ ಎಂದರು.

ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್'ಗೆ ಸವಾಲು ಹಾಕಿದ ಅವರು, ನನ್ನಿಂದ ಚಾಮರಾಜಪೇಟೆ ಕ್ಷೇತ್ರವನ್ನು ಕಸಿದುಕೊಳ್ಳಲಿ ನೋಡೋಣ. ನನ್ನ ವಿರುದ್ಧ ಯಾರೂ 3,500 ಮತಗಳನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕಳೆದ ಬಾರಿ ನನ್ನ ಸೋಲನ್ನು ಖಚಿತಪಡಿಸಿಕೊಳ್ಳಲು ಮಾಜಿ ಪ್ರಧಾನಿ ಚ್‌ಡಿ ದೇವೇಗೌಡರು ಮತ್ತು ಜೆಡಿಎಸ್ ನಾಯಕರು ತೀವ್ರ ಪ್ರಯತ್ನ ನಡೆಸಿದರು. ಈ ಪ್ರಯತ್ನಗಳ ಫಲವಾಗಿಯೂ ನನ್ನ ಗೆಲುವಿನ ಅಂತರದ ಮತ್ತಷ್ಟು ಹೆಚ್ಚಾಗಿತ್ತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com