ಡಿಸೆಂಬರ್ 10ಕ್ಕೆ ಕಲಬುರಗಿಗೆ ಮಲ್ಲಿಕಾರ್ಜುನ ಖರ್ಗೆ: ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಸಿದ್ಧತೆ!
ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿ.10ರಂದು ಕಲಬುರಗಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆಯವರ ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ.
Published: 07th December 2022 07:56 AM | Last Updated: 07th December 2022 01:38 PM | A+A A-

ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿ.10ರಂದು ಕಲಬುರಗಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಖರ್ಗೆಯವರ ಭರ್ಜರಿ ಸ್ವಾಗತಕ್ಕೆ ಕಾಂಗ್ರೆಸ್ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ.
ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಧ್ಯಕ್ಷರಿಗೆ ಏರ್‌ಪೋರ್ಟ್‌ನಿಂದ ನೂತನ ವಿದ್ಯಾಲಯ ಮೈದಾನದವರೆಗೆ ಭವ್ಯ ಮೆರವಣಿಗೆಯನ್ನು ಆಯೋಜಿಸುವ ಮೂಲಕ ಸ್ವಾಗತಿಸಲು ಯೋಜಿಸಿದ್ದಾರೆ, ಅಲ್ಲಿ ಅವರನ್ನು ಪಕ್ಷದ ಉನ್ನತ ಹುದ್ದೆಗೆ ಆಯ್ಕೆ ಮಾಡಿದ್ದಕ್ಕಾಗಿ ಮತ್ತು 371 ಜೆ ಕಲಂಗೆ ತಿದ್ದುಪಡಿ ತರುವಲ್ಲಿ ಅವರ ಪಾತ್ರಕ್ಕಾಗಿ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಜಿ ಶಾಸಕ ಎ.ವಿ.ಉಮಾಪತಿ ಅವರು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಖರ್ಗೆಯವರು ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲು ಚಿಂತನೆ ನಡೆಸಿದ್ದಾರೆ.
2023ರ ಮಾರ್ಚ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನವೇ ಬಜೆಟ್ ಮಂಡನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ. ಒಂದು ವೇಳೆ ಚುನಾವಣೆಗೂ ಮುನ್ನವೇ ಬಿಜೆಪಿ ಬಜೆಟ್ ಮಂಡನೆ ಮಾಡಲು ಮುಂದಾದರೆ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ರಾಜ್ಯ ಕಾಂಗ್ರೆಸ್ ಚರ್ಚೆ ನಡೆಸಲಿದೆ ಎಂದು ತಿಳಿದುಬಂದಿದೆ.