ಖರ್ಗೆ, ಸಿದ್ದರಾಮಯ್ಯ ನಂತರ ಡಿಕೆ ಶಿವಕುಮಾರ್ ಭೇಟಿಯಾದ ಎಚ್. ವಿಶ್ವನಾಥ್
ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು...
Published: 09th December 2022 04:12 PM | Last Updated: 09th December 2022 04:53 PM | A+A A-

ಡಿಕೆ ಶಿವಕುಮಾರ್ ಭೇಟಿಯಾದ ಎಚ್. ವಿಶ್ವನಾಥ್
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಹಳ್ಳಿ ಹಕ್ಕಿ ಮರಳಿ ಕಾಂಗ್ರೆಸ್ ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.
ಇದನ್ನು ಓದಿ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ ಮಾಡಿದ ತಕ್ಷಣ ಕಾಂಗ್ರೆಸ್ಗೆ ಹೋಗುತ್ತೇನೆ ಎಂದಲ್ಲ: ವಿಶ್ವನಾಥ್ ಸ್ಪಷ್ಟನೆ
ಎಚ್. ವಿಶ್ವನಾಥ್ ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಎಸ್. ಆರ್. ಪಾಟೀಲ್ ಸಹ ಜೊತೆಗಿದ್ದರು.
ಇದನ್ನು ಓದಿ: ಖರ್ಗೆ ಭೇಟಿ ಬೆನ್ನಲ್ಲೇ ಸಿದ್ದರಾಮಯ್ಯ ಭೇಟಿಯಾದ ಎಚ್ ವಿಶ್ವನಾಥ್, ಕುತೂಹಲ ಮೂಡಿಸಿದ 'ಹಳ್ಳಿ ಹಕ್ಕಿ' ನಡೆ
ವಿಶ್ವನಾಥ್ ಅವರು ತಮ್ಮನ್ನು ಭೇಟಿ ಮಾಡಿದ ಬಗ್ಗೆ ಡಿ. ಕೆ. ಶಿವಕುಮಾರ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದು, ವಿದೇಶದಿಂದ ಮರಳಿದ ನಂತರ ಎಂದಿನಂತೆ ಭೇಟಿ ಕಾರ್ಯಗಳಲ್ಲಿ ನಿರತನಾಗಿದ್ದೇನೆ. ಮಾಜಿ ಸಚಿವರಾದ ಎಚ್. ವಿಶ್ವನಾಥ್ ಅವರು ಇಂದು ಗೃಹ ಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಪರಿಷತ್ ಮಾಜಿ ಅಧ್ಯಕ್ಷರಾದ ಎಸ್. ಆರ್. ಪಾಟೀಲ್ ಅವರು ತಮ್ಮ ಮಗಳ ಮದುವೆಗೆ ಆಗಮಿಸುವಂತೆ ನನ್ನನ್ನು ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.