ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 55 ಸ್ಥಾನ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ: ಹೆಚ್'ಡಿ ಕುಮಾರಸ್ವಾಮಿ

2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿಯ ಸುಮಾರು 50 ಮುಖಂಡರು ಜೆಡಿಎಸ್‌ಗೆ ಸೇರ್ಪಡೆಗೊಂಡರು. ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು, ಮಾಜಿ ಉಪಮೇಯರ್ ರಾಮೇಗೌಡ, ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ. ಆದರೆ, ಪಂಚರತ್ನ ಯಾತ್ರೆಗೆ ದೊರೆತ ಅಭೂತಪೂರ್ವ ಪ್ರತಿಕ್ರಿಯೆಯನ್ನು ಪರಿಗಣಿಸಿ ಪಕ್ಷ 123 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಎರಡು ತಿಂಗಳಿಗೊಮ್ಮೆ ಆಂತರಿಕ ಸಮೀಕ್ಷೆ ಬಳಿಕ ರಾಷ್ಟ್ರೀಯ ಪಕ್ಷಗಳು ನಾನಾ ತಂತ್ರಗಳನ್ನು ಹೆಣೆಯುತ್ತಿವೆ. ಸಮೀಕ್ಷೆಗಳು ಜೆಡಿಎಸ್‌ನ ಪಥವು ಮೇಲ್ಮುಖವಾಗಿದೆ ಎಂದು ತೋರಿಸುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಕುಮಾರಸ್ವಾಮಿ ನೇತೃತ್ವದ ಪಂಚರತ್ನ ಅಭಿಯಾನದಿಂದ ಜೆಡಿಎಸ್ ಶಕ್ತಿ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಹೇಳಿದರು.

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಬೆಳವಣಿಗೆಗಳ ನಡುವೆ ಜೆಡಿಎಸ್ ತನ್ನ ಗುರಿಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಚಾಮರಾಜಪೇಟೆ ಕ್ಷೇತ್ರವನ್ನು ಜೆಡಿಎಸ್ ಗೆಲ್ಲುವುದು ಖಚಿತ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜಪೇಟೆ ಬೆಂಗಳೂರಿನ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದು, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಅಭಿಮಾನಿ ಮತ್ತು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಕ್ಷೇತ್ರದ ಕುರಿತು ಜೆಡಿಎಸ್'ಗೆ ಆಗಾಗ್ಗೆ ಸವಾಲು ಹಾಕುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com