ಕಾಂಗ್ರೆಸ್ ಸೇರ್ಪಡೆ ವಿಚಾರ ಖಚಿತಪಡಿಸಿದ ಅಡಗೂರು ಎಚ್.ವಿಶ್ವನಾಥ್

ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.
ವಿಶ್ವನಾಥ್
ವಿಶ್ವನಾಥ್

ಬೆಂಗಳೂರು: ಬಿಜೆಪಿ ಸೇರಿದ್ದ ಪ್ರಮುಖ ಬಂಡಾಯ ನಾಯಕರೊಬ್ಬರು ಕಾಂಗ್ರೆಸ್‌ಗೆ ವಾಪಸ್ಸಾಗುತ್ತಿರುವುದು ಇದೀಗ ಖಚಿತಗೊಂಡಿದ್ದು, ಇತರರ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

ಅಡಗೂರು ವಿಶ್ವನಾಥ್ (72) ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

ವಿಶ್ವನಾಥ್ ಅವರು 2019 ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿ ಸೇರ್ಪಡೆ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವಂತೆ ಮಾಡಿ, ಯಡಿಯೂರಪ್ಪ ಮತ್ತೆ ಸಿಎಂ ಆಗಲು ಸಹಾಯ ಮಾಡಿದರು.

ಬಿಜೆಪಿಗೆ ಬಂದಿದ್ದ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಕೊಟ್ಟ ಭರವಸೆ ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ಅಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಕಳೆದ ಬಾರಿ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ವಿಜಯಶಂಕರ್‌ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತ್ತು. ಆದರೆ, ಚುನಾವಣೆ ನಂತರ ಅವರು ಮತ್ತೆ ಬಿಜೆಪಿಗೆ ಮರಳಿದ್ದರು.

ಮೂಲಗಳ ಪ್ರಕಾರ, “ಬಿಜೆಪಿಗೆ ಸೇರ್ಪಡೆಗೊಂಡ ತಂಡದಲ್ಲಿ ವಿಶ್ವನಾಥ್ ಮಾತ್ರವಲ್ಲದೆ, ಮಾಜಿ ಹಾಲಿ ಶಾಸಕ ಪ್ರತಾಪಗೌಡ ಪಾಟೀಲ್ ಕೂಡ ಆ ನಿರ್ಧಾರದಿಂದ ಬೇಸರಗೊಂಡಿದ್ದಾರೆಂದು ತಿಳಿದುಬಂದಿದೆ, ಹಾಗೆಯೇ ಕೇಲವ ಶಾಸಕರ ಸ್ಥಾನ ಪಡೆದುಕೊಂಡಿರುವ ಮಾಜಿ ಸಚಿವ ಆರ್ ಶಂಕರ್ ಅವರು ಕೂಡ ಬೇಸರಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಂಕರ್ ಅವರು, ಕಾದು ನೋಡೋಣ ಏನಾಗುತ್ತದೆ ಎಂದು ಹೇಳಿದ್ದಾರೆ.

ತನಿಖಾ ಅಧಿಕಾರಿಗಳು ತಿಂಗಳ ಹಿಂದೆಯೇ ಕ್ಲೀನ್ ಚಿಟ್ ನೀಡಿದ್ದರೂ ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಮಂತ್ರಿಗಿರಿ ಸ್ಥಾನ ನೀಡಿಲ್ಲ. ಇದೀಗ 17 ಬಂಡಾಯನಾಯಕರು ಜೊತೆಗೆ ಪರಸ್ಪರ ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com